ADVERTISEMENT

ಅಡ್ವಾಣಿ ಅವರನ್ನು ರಾಷ್ಟ್ರಪತಿ ಮಾಡಲು ಆಗುತ್ತಿರಲಿಲ್ಲವೇ?: ಎಚ್‌.ಡಿ.ದೇವೇಗೌಡ

ಪ್ರಧಾನಿ ಮೋದಿ ವಿರುದ್ಧ ಜೆಡಿಎಸ್‌ ವರಿಷ್ಠ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2019, 13:11 IST
Last Updated 3 ಏಪ್ರಿಲ್ 2019, 13:11 IST
ಎಚ್‌.ಡಿ.ದೇವೇಗೌಡ
ಎಚ್‌.ಡಿ.ದೇವೇಗೌಡ    

ಹಾಸನ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಇಲ್ಲದಿದ್ದರೆ ನರೇಂದ್ರ ಮೋದಿ ಮುಗಿದು ಹೋಗುತ್ತಿದ್ದರು ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಸಕಲೇಶಪುರ ತಾಲ್ಲೂಕು ವನಗೂರಿನಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ನಡೆಸಿದ ಅವರು, ‘ಹಿರಿಯ ಮುತ್ಸದ್ದಿ ಅಡ್ವಾಣಿ ಈಗ ಏನಾಗಿದ್ದಾರೆ. ಅವರನ್ನ ರಾಷ್ಟಪತಿ ಮಾಡಲು ಆಗ್ತಿರಲಿಲ್ಲವೇ?ಒಬ್ಬ ವ್ಯಕ್ತಿ ಹೀಗೆ ನಡೆದುಕೊಳ್ಳುವುದು ಎಷ್ಟು ಸರಿ.ಮಾನಸಿಕ ವೇದನೆ ನೀಡುವ ಮೂಲಕ ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಿದ ಕೀರ್ತಿ ಮೋದಿಗೆ ಸಲ್ಲುತ್ತದೆ. ಅವರಿಂದಲೇ ಬೆಳೆದ ವ್ಯಕ್ತಿ ಹಿರಿಯರಿಗೆ ನೀಡುತ್ತಿರುವ ಗೌರವ ಅವರ ಸಂಸ್ಕೃತಿಯನ್ನು ತೋರುತ್ತದೆ’ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಬಾರಿ ಸ್ಪರ್ಧಿಸದಿರಲು ನಿರ್ಧರಿಸಿದ್ದೆ, ಆದರೆ ಮಹಾ ಘಟಬಂಧನ್‌ ಮುನ್ನಡೆಸಲು ಲೋಕಸಭೆಯಲ್ಲಿ ಇರಲೇಬೇಕು ಎಂಬ ನಾಯಕರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎರಡೇ ದಿನ ಪ್ರಚಾರ ನಡೆಸುತ್ತೇನೆ. ಸಂಪೂರ್ಣ ಜವಾಬ್ದಾರಿಯನ್ನು ಪರಮೇಶ್ವರ್‌ ವಹಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.