ADVERTISEMENT

ಆಲೂರು | ‘ನಾಡಿನ ಅಪೂರ್ವ ಸಾಹಸಿ’

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 14:31 IST
Last Updated 27 ಜೂನ್ 2025, 14:31 IST
ಆಲೂರು ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ ಪಟೇಲ್ ಮಾತನಾಡಿದರು. ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ, ಮೋಹನಕುಮಾರ್, ಎಚ್.ಪಿ. ಮೋಹನ್, ಕೆ.ಎಸ್. ಮಂಜೇಗೌಡ ಭಾಗವಹಿಸಿದ್ದರು
ಆಲೂರು ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ ಪಟೇಲ್ ಮಾತನಾಡಿದರು. ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ, ಮೋಹನಕುಮಾರ್, ಎಚ್.ಪಿ. ಮೋಹನ್, ಕೆ.ಎಸ್. ಮಂಜೇಗೌಡ ಭಾಗವಹಿಸಿದ್ದರು   

ಆಲೂರು: ‘ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಇಡೀ ವಿಶ್ವವೇ ಕಣ್ತೆರೆದು ನೋಡುವಂತೆ ಮಾಡಿದ ಅಪೂರ್ವ ಸಾಹಸಿ’ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.

ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲ್ಲೂಕು ರಾಷ್ಟ್ರಿಯ ಹಬ್ಬಗಳ ಆಚರಣ ಸಮಿತಿ, ತಾಲ್ಲೂಕು ಒಕ್ಕಲಿಗರ ಸಂಘ, ಯುವಕ ಸಂಘದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಾಸಕ ಸಿಮೆಂಟ್ ಮಂಜು ಮಾತನಾಡಿ, ‘ಕೆಂಪೇಗೌಡರು ಎಲ್ಲಾ ಮತ ಧರ್ಮಗಳನ್ನು ಸಮಭಾವದಿಂದ ಕಂಡವರು. ಭೌಗೋಳಿಕವಾಗಿ ಆಯಕಟ್ಟಿನ ಪ್ರದೇಶದಲ್ಲಿ ಬೆಂಗಳೂರನ್ನು ನಿರ್ಮಿಸಿದರು’ ಎಂದರು.

ADVERTISEMENT

ಹಂಪನಹಳ್ಳಿ ತಿಮ್ಮೇಗೌಡ ಮಾತನಾಡಿದರು. ಸಮಾರಂಭದಲ್ಲಿ ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ, ಗ್ರೇಡ್-2 ತಹಶೀಲ್ದಾರ್ ಮೋಹನಕುಮಾರ್, ಸ್ಫೂರ್ತಿ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಪಿ. ಮೋಹನ್, ಉಪಾಧ್ಯಕ್ಷ ಕೆ.ಎಸ್. ಮಂಜೇಗೌಡ, ಖಜಾಂಚಿ ಶಾಂತಕೃಷ್ಣ, ಜಿಲ್ಲಾ ಒಕ್ಕಲಿಗರ ಸಂಘಧ ನಿರ್ದೇಶಕ ರಘುಗೌಡ, ಮುರಳಿಮೋಹನ, ತಾ.ಪಂ. ಇಒ ಸುಬ್ರಹ್ಮಣ್ಯಶರ್ಮ, ಬಿಇಒ ಎ.ಜೆ. ಕೃಷ್ಣೇಗೌಡ, ಪ. ಪಂ. ಮುಖ್ಯಾಧಿಕಾರಿ ಮಂಜುನಾಥ್, ಬಿ. ರೇಣುಕಪ್ರಸಾದ್, ಅಜಿತ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಬೆಳ್ಳಿ ಸಾರೋಟಿನಲ್ಲಿ ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ವೀರಶೈವ ಕಲ್ಯಾಣ ಮಂಟಪದಿಂದ ಒಕ್ಕಲಿಗರ ಸಮುದಾಯ ಭವನದವರೆಗೆ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ಮಾಡಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.