ADVERTISEMENT

ಅಂಬೇಡ್ಕರ್ ಭವನ, ಪುತ್ಥಳಿಗೆ ಹೆಚ್ಚುವರಿ ಅನುದಾನ: ಡಾ.ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 4:58 IST
Last Updated 7 ಫೆಬ್ರುವರಿ 2026, 4:58 IST
ಹಿರೀಸಾವೆಯಲ್ಲಿ ಶುಕ್ರವಾರ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು.
ಹಿರೀಸಾವೆಯಲ್ಲಿ ಶುಕ್ರವಾರ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು.   

ಹಿರೀಸಾವೆ: ರಾಜ್ಯದ ವಿವಿಧ ಕಡೆಗಳಲ್ಲಿ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್ ಪುತ್ಥಳಿ ಹಾಗೂ ಭವನಗಳ ನಿರ್ಮಾಣಕ್ಕೆ ಸರ್ಕಾರದಿಂದ ಹಂತ ಹಂತವಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ಶುಕ್ರವಾರ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಹಿರೀಸಾವೆ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ದಲಿತಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಮುಖಂಡರ ಸ್ವಾಗತ ಸ್ವೀಕರಿಸಿ ಅವರು ಮಾತನಾಡಿದರು.

ಕೆಲವು ಕಡೆ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು, ಈ ವರ್ಷದ ಕೊನೆಯಲ್ಲಿ ಲೋಕಾರ್ಪಣೆಯಾಗಲಿವೆ. ಸ್ಥಳಿಯರ ಬೇಡಿಕೆಯಂತೆ ಹಿರೀಸಾವೆಯ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಶಂಕುಸ್ಥಾಪನೆಗೆ ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು. ಇಲ್ಲಿನ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರದಿಂದ ₹75 ಲಕ್ಷ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿ ಮಾಡಬೇಕು. ಭವನದ ಹೆಚ್ಚಿನ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ADVERTISEMENT

ಜಿ.ಪರಮೇಶ್ವರ್ ಯುವಕರ ಸಂಘದ ಅಧ್ಯಕ್ಷ ಮಂಜುನಾಥ ಮೌರ್ಯ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್, ಮಹೇಶ್, ದಲಿತಪರ ಸಂಘಟನೆ ಹೊಸಹಳ್ಳಿ ಅಣ್ಣಯ್ಯ, ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.