ADVERTISEMENT

ಅಂಬೇಡ್ಕರ್ ಭವನಕ್ಕೆ ಮೂಲ ಸೌಕರ್ಯ

ಸಮಾಜ ಕಲ್ಯಾಣ ಅಧಿಕಾರಿಗೆ ಡಿಸಿ ಅಕ್ರಂ ಪಾಷಾ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 14:39 IST
Last Updated 10 ಜುಲೈ 2019, 14:39 IST
ಹಾಸನದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಅಧಿಕಾರಿಗಳ ಸಭೆ ನಡೆಸಿದರು.
ಹಾಸನದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಅಧಿಕಾರಿಗಳ ಸಭೆ ನಡೆಸಿದರು.   

ಹಾಸನ: ನಗರದ ಅಂಬೇಡ್ಕರ್ ಭವನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ವ್ಯವಸ್ಥಿತ ಮೂಲಭೂತ ಸೌಕರ್ಯ ಒದಗಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.

ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭವನದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಕೇವಲ ನಿರ್ವಹಣಾ ವೆಚ್ಚ ಭರಿಸಿ, ಖಾಸಗಿ ಕಾರ್ಯಕ್ರಮಗಳಿಗೆ ನಿರ್ವಹಣಾ ವೆಚ್ಚದ ಜೊತೆಗೆ ನಿಗದಿತ ಶುಲ್ಕ ಪಡೆಯಲು ಅವರು ತಿಳಿಸಿದರು.

ADVERTISEMENT

ಬೇಲೂರು ತಾಲ್ಲೂಕು ನರಸೀಪುರದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದ ಸ್ಥಳವನ್ನು ಇಲಾಖೆ ಅಧಿಕಾರಿಗಳು ಹಾಗೂ ಕೆ.ಆರ್.ಐ.ಡಿ.ಎಲ್ ಎಂಜಿನಿಯರ್‌ಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ನೀಡಬೇಕು ಎಂದರು.

ರಾಜ್ಯ ದಲಿತ ಸಂಘರ್ಷ ಸಮಿತಿಯ ಈರಪ್ಪ ಮಾತನಾಡಿ, ಭವನದಲ್ಲಿ ಮೂಲ ಸೌಕರ್ಯ ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಗ್ರಂಥಾಲಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತು ಶುಭ ಸಮಾರಂಭಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಕೆ. ಸಂದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೆಂಕಟರಮಣರೆಡ್ಡಿ, ನಗರಸಭಾ ಆಯುಕ್ತ ಪರಮೇಶ್, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ಜಗದೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.