ADVERTISEMENT

ಹಾಸನ | ದೊಡ್ಡತಪ್ಪಲೆ ಬಳಿ ಮತ್ತೆ ಭೂಕುಸಿತ: ಮಣ್ಣಿನಡಿ ವಾಹನಗಳು ಸಿಲುಕಿರುವ ಶಂಕೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 13:49 IST
Last Updated 31 ಜುಲೈ 2024, 13:49 IST
   

ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ–75 ರಲ್ಲಿ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಬುಧವಾರ ಸಂಜೆ ಮತ್ತೆ ಭೂಕುಸಿತವಾಗಿದ್ದು, ಒಂದು ಕಂಟೈನರ್‌ ಲಾರಿ ಸೇರಿದಂತೆ ಹಲವು ವಾಹನಗಳ ಮೇಲೆ ಮಣ್ಣು ಬಿದ್ದಿದೆ.

ಗುಡ್ಡ ಕುಸಿತದ ರಭಸಕ್ಕೆ ಬೃಹತ್ ಗಾತ್ರದ ಕಂಟೈನರ್ ಪಲ್ಟಿಯಾಗಿದ್ದು, ಮಣ್ಣಿನಡಿ ಹಲವು ವಾಹನಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಚಾಲಕ ಕಂಟೈನರ್‌ನಲ್ಲಿ ಸಿಲುಕಿದ್ದಾರೆ.

ಬುಧವಾರ ಬೆಳಿಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಸಂಜೆ ಮಳೆ ಹೆಚ್ಚಾಗಿದ್ದರಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದೆ.

ADVERTISEMENT

ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಮಾಡಲಾಗಿದ್ದು, ರಸ್ತೆಯಲ್ಲಿ ನೂರಾರು ವಾಹನ ನಿಂತುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.