ADVERTISEMENT

ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಣೆ: ಸಚಿವ ಕೆ. ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 17:21 IST
Last Updated 10 ಜೂನ್ 2021, 17:21 IST

ಹಾಸನ: ಜಿಲ್ಲೆಯಲ್ಲಿ ಜೂನ್‌ 14 ರಿಂದ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.

ಮುಖ್ಯಮಂತ್ರಿ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಮುಖ್ಯಮಂತ್ರಿ ನಿರ್ದೇಶನ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ. ವ್ಯೆದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
ಎರಡನೇ ಹಂತದಲ್ಲಿ ಪ್ರಾರಂಭವಾಗಿದೆ ಎಂದು ಹೇಳಿದರು.

ಜಿಲ್ಲೆಯ 23 ಹಳ್ಳಿಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿದ್ದು , ವೈದ್ಯರ ತಂಡ ಪ್ರತಿ ಮನೆಗೆ ಭೇಟಿ ನೀಡಿ, ಸೂಕ್ತ ಚಿಕಿತ್ಸೆ ಹಾಗೂ ಸೋಂಕು ದೃಢಪಟ್ಟವರಿಗೆ ಕೋವಿಡ್ ಕೇರ್ಕೇಂದ್ರಗಳಿಗೆ ದಾಖಲಿಸಲು ಸೂಚಿಸಲಾಗಿದೆ ಎಂದರು.

ADVERTISEMENT

ಸರ್ಕಾರದ ಮಾರ್ಗಸೂಚಿಯಂತೆ ಹೋಂ ಐಸೋಲೇಷನ್ ನಲ್ಲಿರುವ ಎಲ್ಲರನ್ನೂಕಡ್ಡಾಯವಾಗಿ ಸಿ.ಸಿ. ಕೇಂದ್ರಗಳಿಗೆ ದಾಖಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ವಿಡಿಯೋ ಸಂವಾದ:ಬೆಳಿಗ್ಗೆ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಥಳೀಯ ಪರಿಸ್ಥಿತಿ ಗಮನಿಸಿಕೊಂಡು ಜಿಲ್ಲಾಹಂತದಲ್ಲಿ ನಿರ್ಧಾರಗಳನ್ನು ಕೈಗೊಳ್ಳಲು ಸೂಚಿಸಿದರು.

ಸರ್ಕಾರ ಕೈಗೊಂಡಿರುವ ಕಠಿಣ ನಿರ್ಧಾರಗಳಿಂದ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಆದರೆ, ಹಾಸನ, ಮೈಸೂರು, ಮಂಡ್ಯ, ತುಮಕೂರು ಸೆರಿದಂತೆಇನ್ನೂ 8 ಜಿಲ್ಲೆಗಳ ಪ್ರಕರಣ ಪ್ರಮಾಣ ನೀರಿಕ್ಷಿತ ಪ್ರಮಾಣದಲ್ಲಿ ತಗಿಲ್ಲ. ಹಾಗಾಗಿ ಈ
ಜಿಲ್ಲೆಗಳು ಹೆಚ್ಚು ಮುತುವರ್ಜಿ ವಹಸಿಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಉಪ ಮುಖ್ಯಮಂತ್ರಿ ಸಿ.ಅಶ್ವತ್ಥ್ ನಾರಯಣ ಮಾತನಾಡಿ, ಜಿಲ್ಲೆಯ ಗ್ರಾಮೀಣಪ್ರೇಶದಲ್ಲಿ ಹೆಚ್ಚು ಸೋಂಕಿತರಿದ್ದಾರೆ. ಕೋವಿಡ್ ಕೇರ್‌ ಕೇಂದ್ರಗಳಲ್ಲಿ 3,590ಬೆಡ್‍ಗಳು ಲಭ್ಯವಿದ್ದು , 1,527 ಬೆಡ್‍ಗಳು ಖಾಲಿ ಇವೆ. ಜಿಲ್ಲೆಯ 23
ಗ್ರಾಮಗಳು ಹಾಗೂ 1 ನಗರ ಪ್ರದೇಶದಲ್ಲಿ ಸೋಂಕು ಹೆಚ್ಚಿದ್ದು, ಇದನ್ನುನಿಯಂತ್ರಿಸುವಂತೆ ಸೂಚಿಸಿದರು.

ಕೆ. ಗೋಪಾಲಯ್ಯ ಮಾತನಾಡಿ, ಮುಂದಿನ ವಾರದೊಳಗೆ ಗ್ರಾಮೀಣ ಪ್ರದೇಶಗಳಲ್ಲಿಸೋಂಕಿನ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, 23 ಗ್ರಾಮಗಳಿಗೆ ಹೆಚ್ಚಿನವೈದ್ಯರ ತಂಡಗಳನ್ನು ಕಳುಹಿಸಿ, ಸೊಂಕಿತರನ್ನು ಪತ್ತೆ ಹಚ್ಚಿ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ಕರೆತಂದು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಜೂನ್ 3 ರಿಂದ 9 ರ ವರೆಗೆ ಶೇ 17.9ರಷ್ಟು ಇಳಿಮುಖವಾಗಿದ್ದು, ಪ್ರತಿನಿತ್ಯ 5000 ಕ್ಕೂ ಅಧಿಕ ಪರೀಕ್ಷೆ ನಡೆಸಲಾಗುತ್ತಿದೆ.ಶೇ.50 ರಷ್ಟು ರ್‍ಯಾಟ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿಆರ್‌ಟಿ–ಪಿಸಿಆರ್‌ ಪರೀಕ್ಷೆ ಹೆಚ್ಚಿಸಲಾಗುವುದು ಎಂದರು.

ಸುಮಾರು 35 ಕೋವಿಡ್ ಕೇರ್ ಕೇಂದ್ರಗಳಲ್ಲಿ 2 ಸಾವಿರ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ 100 ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 45 ರಿಂದ 59 ವರ್ಷದವರಿಗೆ ಶೇ 41 ರಷ್ಟು ಹಾಗೂ ಹಿರಿಯ ನಾಗರಿಕರಿಗೆ ಶೇ 81 ರಷ್ಟು ಲಸಿಕೆ ನೀಡಲಾಗಿದೆ. ಸಂಪೂರ್ಣ ಕೋವಿಡ್ ನಿಯಂತ್ರಣಕ್ಕೆ ಒಂದು ವಾರ ಕಾಲ ಲಾಕ್ ಡೌನ್‌ ವಿಸ್ತರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್, ಆರ್.ಸಿ.ಎಚ್. ಅಧಿಕಾರಿ ಡಾ. ಕಾಂತರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.