ಚನ್ನರಾಯಪಟ್ಟಣ: ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಶಾಲಿನಿ ವಿದ್ಯಾಶಾಲೆಯ ವಿದ್ಯಾರ್ಥಿಗಳು ಗುರುವಾರ ಪುರಸಭೆಯ ಕಚೇರಿಗೆ ತೆರಳಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟುವಂತೆ ಮನವಿ ಮಾಡಿದರು.
ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ಅದೇರೀತಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿದ್ಯಾರ್ಥಿಗಳ ನೆರವನ್ನು ಪಡೆದುಕೊಳ್ಳಬೇಕು ಎಂದು ಪುರಸಭಾಧ್ಯಕ್ಷ ಸಿ.ಎನ್. ಮೋಹನ್, ಮುಖ್ಯಾಧಿಕಾರಿ ಆರ್. ಯತೀಶ್‍ಕುಮಾರ್ ಅವರಿಗೆ ಮನವಿ ಮಾಡಿದರು. ನಂತರ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ಮತ್ತು ಕಾಗದದ ಬ್ಯಾಗ್ ಗಳನ್ನು ವಿತರಿಸಿದರು.
ಪುರಸಭಾಧ್ಯಕ್ಷ ಮೋಹನ್ ಮಾತನಾಡಿ, ಸ್ವಚ್ಛತೆ ಕೈಗೊಳ್ಳುವುದು ಸೇರಿ ಪ್ಲಾಸ್ಟಿಕ್ ಬಳಕೆ ತಡೆಯಲು ಪುರಸಭೆ ಕ್ರಮತೆಗೆದುಕೊಂಡಿದೆ. ನಿತ್ಯ ಎಲ್ಲಾ 23 ವಾರ್ಡ್‌ಗಳಲ್ಲಿ ಹಸಿ, ಒಣಕಸವನ್ನು ವಾಹನದಲ್ಲಿ ಸಂಗ್ರಹಿಸಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಿ ಸಂಸ್ಕರಣೆಮಾಡಿ ಗೊಬ್ಬರ ತಯಾರು ಮಾಡಿ ರೈತರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದರು.
ಮುಖ್ಯಾಧಿಕಾರಿ ಯತೀಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕೈಗೊಂಡಿರುವ ನಿರ್ಧಾರ ಉತ್ತಮವಾದುದು. ಭವಿಷ್ಯದ ಈ ಪೀಳಿಗೆಗೆ ಉತ್ತಮ ಪರಿಸರ ದೊರಕಬೇಕೆಂಬ ಕಾಳಜಿ ಅವರಲ್ಲಿದೆ. ತ್ಯಾಜ್ಯ ವಿಲೇವಾರಿಗೆ ಪಟ್ಟಣದಲ್ಲಿ ಆಂದೋಲನಾ ಮಾಡಲಾಗಿದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಪುರಸಭೆ ಹಲವು ಕ್ರಮತೆಗೆದುಕೊಂಡಿದೆ ಎಂದು ತಿಳಿಸಿದರು.
ಶಾಲೆಯ ಮುಖ್ಯಶಿಕ್ಷಕಿ ದೀಪ್ತಿ ಸೋಪಿಯಾ, ಶಿಕ್ಷಕಿ ಉಷಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.