ಅರಕಲಗೂಡು: ಬ್ಯಾಂಕ್‌ಗಳು ಮುಂಜಾಗ್ರತೆ ದೃಷ್ಟಿಯಿಂದ ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಪಿಐ ವಸಂತ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಟ್ಟಣದಲ್ಲಿ ಶನಿವಾರ ತಾಲ್ಲೂಕಿನ ವಿವಿಧ ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಬೀದರ್ ಹಾಗೂ ಮಂಗಳೂರಿನಲ್ಲಿ ನಡೆದಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಎಲ್ಲ ಬ್ಯಾಂಕ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಬ್ಯಾಂಕ್ ಹೊರಗೆ ಮತ್ತು ಒಳಗೆ ಎರಡು ಕಡೆ ಕ್ಯಾಮೆರಾ ಹೊಂದಿರಬೇಕು. ಎಟಿಎಂ ಹಾಗೂ ಬ್ಯಾಂಕ್‌ಗಳಲ್ಲಿ ಹಗಲು, ರಾತ್ರಿ ಕರ್ತವ್ಯ ನಿರ್ವಹಿಸುವ ಭದ್ರತಾ ಸಿಬ್ಬಂದಿಗೆ ಉತ್ತಮ ತರಬೇತಿ ನೀಡಬೇಕು. ಐರನ್ ಡೋರ್ ಲಾಕ್ ಅಳವಡಿಸಬೇಕು. ನಗದು ಸಾಗಿಸುವಾಗ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಹೊಳೆನರಸೀಪುರ ಉಪ ವಿಭಾಗದ ಎಎಸ್‌ಪಿ ಶಾಲು ಮಾತನಾಡಿ, ಬ್ಯಾಂಕ್‌ಗಳಲ್ಲಿ ದರೋಡೆ ನಡೆಸಲು ಇತ್ತೀಚಿನ ದಿನಗಳಲ್ಲಿ ಕಳ್ಳರು ನಾನಾ ಕೈಚಳಕ ನಡೆಸುತ್ತಿದ್ದಾರೆ. ಮುಂಜಾಗ್ರತೆ ವಹಿಸುವುದು ಸೂಕ್ತ. ಈ ನಿಟ್ಟಿನಲ್ಲಿ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜಾಗೃತರಾಗಿರಬೇಕು ಎಂದರು. ಪಟ್ಟಣ ಠಾಣೆ ಪಿಎಸ್‌ಐ, ಕಾವ್ಯಾ, ಕೊಣನೂರು ಪಿಎಸ್‌ಐ ಪ್ರಹ್ಲಾದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.