ADVERTISEMENT

ಅರಕಲಗೂಡು: ಶೇ 82.54 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 3 ಮೇ 2025, 14:49 IST
Last Updated 3 ಮೇ 2025, 14:49 IST
ಸಿ. ಅಭಿಷೇಕ್ ಶೇ 99.2
ಸಿ. ಅಭಿಷೇಕ್ ಶೇ 99.2   

ಅರಕಲಗೂಡು: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಶೇ 82.54 ಫಲಿತಾಂಶ ದೊರೆತಿದ್ದು, ಜಿಲ್ಲಾ ಮಟ್ಟದಲ್ಲಿ 5ನೇ ಸ್ಥಾನ ಪಡೆದಿದೆ. ಪರೀಕ್ಷೆ ಬರೆದಿದ್ದ 2,211 ವಿದ್ಯಾರ್ಥಿಗಳಲ್ಲಿ 1,825 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಪಟ್ಟಣದ ಬಿಜಿಎಸ್ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆದಿದ್ದ 84 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ 100 ಫಲಿತಾಂಶ ಬಂದಿದೆ. ಸಿ. ಅಭಿಷೇಕ್ ಶೇ 99.2 ಅಂಕ ಪಡೆದು ಶಾಲೆಗೆ ಪ್ರಥಮ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೂರನೇ  ಸ್ಥಾನ ಪಡೆದಿದ್ದಾರೆ.

ತಾಲ್ಲೂಕಿನ ಮಲ್ಲಿಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಶೇ 79.62 ಫಲಿತಾಂಶ ದೊರೆತಿದೆ. ಪರೀಕ್ಷೆ ಬರೆದಿದ್ದ 54 ವಿದ್ಯಾರ್ಥಿಗಳಲ್ಲಿ 43 ಮಂದಿ ತೇರ್ಗಡೆಯಾಗಿದ್ದಾರೆ.

ADVERTISEMENT

7 ವಿದ್ಯಾರ್ಥಿಗಳು ಅತ್ಯನ್ನತ ಶ್ರೇಣಿ ಹಾಗೂ 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬಿ.ಜಿ. ದೀಕ್ಷಿತ 571 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂ.ಜಿ. ಜೀವನ (569) ಹಾಗೂ ಎ.ವಿ.ಹಶ್ಮತ (563) 500ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸಿ.ಕೆ. ಮಮತಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.