ಅರಕಲಗೂಡು: ಪಟ್ಟಣದಲ್ಲಿ ಶುಕ್ರವಾರ ಶಂಕರ ಜಯಂತಿ ಪ್ರಯುಕ್ತ ಶಂಕರ ರಥೋತ್ಸವವನ್ನು ಸಂಭ್ರಮದಿಂದ ನೆರವೇರಿಸಲಾಯಿತು.
ಕೋಟೆ ಅಮೃತೇಶ್ವರ ಸ್ವಾಮಿ ದೇವಾಲಯದ ಆವರಣದ ಶಂಕರಾಲಯದಲ್ಲಿ ಶಂಕರಾಚಾರ್ಯರ ಮೂರ್ತಿಗೆ ಪಂಚಾಮೃತ ಅಭಿಷೇಕ ನಡೆಸಿ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಬಳಿಕ ಅಲಂಕರಿಸಿದ ರಥದಲ್ಲಿ ಅಮೃತೇಶ್ವರ ಸ್ವಾಮಿ ಉತ್ಸವ ಮೂರ್ತಿಯೊಂದಿಗೆ ಶಂಕರಾಚಾರ್ಯರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ ರಥ ಬೀದಿಯಲ್ಲಿ ರಥೋತ್ಸವ ನಡೆಸಲಾಯಿತು.
ಭಕ್ತರು ರಥಕ್ಕೆ ಹಣ್ಣು ಕಾಯಿ ಸಮರ್ಪಿಸಿದರು. ರಥ ಸ್ವಸ್ಥಾನ ಸೇರಿದ ಬಳಿಕ ಭಜನೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಸಲಾಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ರಾತ್ರಿ ಸಾಮೂಹಿಕ ಭಜನೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.