ಅರಸಿಕೆರೆ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಅನಂತ ಪಿಯು ಕಾಲೇಜು ವಾಣಿಜ್ಯ ವಿಭಾಗ ಶೇ 100 ಫಲಿತಾಂಶ ಪಡೆದಿದೆ. ಪರೀಕ್ಷೆ ಬರೆದ 165 ವಿದ್ಯಾರ್ಥಿಗಳ ಪೈಕಿ 77 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 26 ವಿದ್ಯಾರ್ಥಿಗಳು ವಿಷಯವಾರು ಶೇ 100 ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಆರ್.ಮೇಘನಾ ಎಂಬ ವಿದ್ಯಾರ್ಥಿನಿ 594 ಅಂಕ ಗಳಿಸಿ ತಾಲ್ಲೂಕಿಗೆ ಪ್ರಥಮ, ಜಿಲ್ಲೆಗೆ ದ್ವಿತೀಯ, ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಲಿನೆಟ್ ಪೆಟ್ರಿಷಿಯ 587 ಅಂಕ ಗಳಿಸಿ ತಾಲ್ಲೂಕಿಗೆ ಪ್ರಥಮ , ಜಿಲ್ಲೆಗೆ ಐದನೇ ಸ್ಥಾನ ರಾಜ್ಯಕ್ಕೆ 13ನೇ ಸ್ಥಾನ ಪಡೆದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಆರ್. ಅನಂತ್ ಕುಮಾರ್, ಪ್ರಾಂಶುಪಾಲರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.