ADVERTISEMENT

ಅರಿವು ಮೂಡಿಸಿ ಜಾರಿಗೊಳಿಸಿ: ರೇವಣ್ಣ ಸಲಹೆ

ಪೌರತ್ವ (ತಿದ್ದುಪಡಿ) ಕಾಯ್ದೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 13:07 IST
Last Updated 19 ಡಿಸೆಂಬರ್ 2019, 13:07 IST
ರೇವಣ್ಣ
ರೇವಣ್ಣ   

ಹಾಸನ: ದೇಶದ ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅರಿವು ಮೂಡಿಸುವವರೆಗೂ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಶಾಸಕ ಎಚ್‌.ಡಿ.ರೇವಣ್ಣ ಸಲಹೆ ನೀಡಿದರು.

ಕಾಯ್ದೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಸಾರ್ವಜನಿಕರ ಆಸ್ತಿ, ಪಾಸ್ತಿ ನಷ್ಟವಾಗುತ್ತಿದೆ. ಹಾಗಾಗಿ ಈ ಕಾಯ್ದೆ ಜಾರಿಗೊಳಿಸಿದರೆ ಯಾರಿಗೆ ಅನುಕೂಲವಾಗುತ್ತದೆ, ಯಾರಿಗೆ ತೊಂದರೆ ಆಗುತ್ತದೆ ಎಂಬುದರ ಕುರಿತು ಜಾಗೃತಿ ಮೂಡಿಸಬೇಕು. ಇಲ್ಲವಾದರೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ. ರಾಜ್ಯಸಭೆಯಲೂ ಜೆಡಿಎಸ್‌ ಸದಸ್ಯರು ಈ ತಿದ್ದುಪಡಿ ಕಾಯ್ದೆಯ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ವ ಪಕ್ಷಗಳ ಸಭೆ ಕರೆದು ಸಮಾಲೋಚನೆ ನಡೆಸಬೇಕು. ಅದೇ ರೀತಿ ಎಲ್ಲಾ ವರ್ಗದರೊಂದಿಗೆ ಚರ್ಚಿಸಬೇಕು. ಅಧಿಕಾರವಿದೆ ಎಂಬ ಕಾರಣಕ್ಕೆ ಏನು ಮಾಡಿದರೂ ನಡೆಯುತ್ತದೆ ಅಂಥ ಅಂದುಕೊಂಡಿದ್ದೆ ಮುಂದೊಂದು ದಿನ ಅದು ಬಿಜೆಪಿಗೆ ಮುಳ್ಳಾಗುತ್ತದೆ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.