ADVERTISEMENT

ಅರಕಲಗೂಡು: ಉಳುಮೇಶ್ವರಸ್ವಾಮಿ ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 4:48 IST
Last Updated 2 ಫೆಬ್ರುವರಿ 2026, 4:48 IST
ಅರಕಲಗೂಡು ತಾಲ್ಲೂಕು ಮಲ್ಲಿಪಟ್ಟಣದ ಉಳುಮೇಶ್ವರಸ್ವಾಮಿ ರಥೋತ್ಸವ ಭಾನುವಾರ ಸಂಭ್ರಮದಿಂದ ನಡೆಯಿತು
ಅರಕಲಗೂಡು ತಾಲ್ಲೂಕು ಮಲ್ಲಿಪಟ್ಟಣದ ಉಳುಮೇಶ್ವರಸ್ವಾಮಿ ರಥೋತ್ಸವ ಭಾನುವಾರ ಸಂಭ್ರಮದಿಂದ ನಡೆಯಿತು   

ಅರಕಲಗೂಡು: ತಾಲ್ಲೂಕಿನ ಮಲ್ಲಿಪಟ್ಟಣದ ಉಳುಮೇಶ್ವರಸ್ವಾಮಿ ರಥೋತ್ಸವ ಭಾನುವಾರ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಬೆಳಿಗ್ಗೆ ದೇವಾಲಯದಲ್ಲಿ ಅಭಿಷೇಕ, ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಬಳಿಕ ಉತ್ಸವಮೂರ್ತಿಯನ್ನು ಅಲಂಕರಿಸಿ ಕೃಷ್ಣಗಂಧೋತ್ಸವ ನಡೆಸಲಾಯಿತು.

ಉತ್ಸವದಲ್ಲಿ ಹಲವು ‌ದೇವರಮೂರ್ತಿಗಳನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯ ನಡೆಸಲಾಯಿತು.

ADVERTISEMENT

ಬಳಿಕ ಭಕ್ತರು ಶಿವನಾಮ ಸ್ಮರಣೆ ಮಾಡುತ್ತಾ ರಥ ಬೀದಿಯಲ್ಲಿ ತೇರನ್ನು ಎಳೆದು ಸಂಭ್ರಮಿಸಿದರು. ಭಕ್ತರು ತೇರಿಗೆ ಹಣ್ಣು,ದವನ, ಪತ್ರ ತೂರಿ ಸಂಭ್ರಮಿಸಿದರು. ಸುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.