
ಪ್ರಜಾವಾಣಿ ವಾರ್ತೆ
ಅರಕಲಗೂಡು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸಹಯೋಗದಲ್ಲಿ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಲ್ಲಿ ಕೃಷಿ ನರ್ಸರಿ ತರಬೇತಿ ಕಾರ್ಯಾಗಾರವನ್ನು ಶುಕ್ರವಾರ ಏರ್ಪಡಿಸಲಾಗಿತ್ತು.
ಪ್ರಗತಿಪರ ಕೃಷಿಕ ಯೋಗೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿವಿಧ ರೀತಿಯ ಗಿಡಗಳ ನರ್ಸರಿ ತಯಾರಿ ಹಾಗೂ ಅದರ ನಿರ್ವಹಣೆ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಎಂ. ಸುನೀಲ್ ಕುಮಾರ್ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ರಜಿನಿ, ಕಾಮಕ್ಷಮ್ಮ, ವಸಂತ್, ಪುನೀತ್, ಶಿವರಾಜ್, ಸೇವಾಪ್ರತಿನಿಧಿ ಬೇಬಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.