ADVERTISEMENT

ಕೆರೆಗಳ ತಾತ್ಕಾಲಿಕ ದುರಸ್ತಿಗೆ ಕ್ರಮವಹಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 15:16 IST
Last Updated 14 ನವೆಂಬರ್ 2020, 15:16 IST
ಹಾಸನದಲ್ಲಿ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಅಧಿಕಾರಿಗಳ ಸಭೆ ನಡೆಸಿದರು.
ಹಾಸನದಲ್ಲಿ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಅಧಿಕಾರಿಗಳ ಸಭೆ ನಡೆಸಿದರು.   

ಹಾಸನ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೆ ಒಳಗಾಗಿರುವ ಎಲ್ಲಾ ಕೆರೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಪಡಿಸಲು
ಕ್ರಮವಹಿಸುವಂತೆ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸಣ್ಣ ನೀರಾವರಿ ಕೆರೆಗಳ ಪುನರುಜ್ಜೀವನದ ಪ್ರಗತಿ ಪರಿಶೀಲನಾ ಸಭೆ ನಡೆಸಿ
ಮಾತನಾಡಿದ ಅವರು, ಬಾಕಿ ಉಳಿದಿರುವ ಕೆರೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಕೆರೆ ಆಯ್ಕೆ ಮಾಡಿ, ಪ್ರೇಕ್ಷಣೀಯ ಹಾಗೂ ಪ್ರವಾಸಿ ತಾಣದಂತೆ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ, ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ‌ನಿರ್ದೇಶನ ನೀಡಿದರು.

ಕೆರೆಗಳ ಏರಿ ಮತ್ತು ಹೆದ್ದಾರಿ ಪಕ್ಕದ ಕೆರೆಯಲ್ಲಿರುವ ಜಾಲಿ ಮರಗಳನ್ನು ತೆರೆವುಗೊಳಿಸಲು ಅಧಿಕಾರಿಗಳಿಗೆ ಆದೇಶಿಸುವಂತೆ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಎಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು, ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳವಂತೆ ಹೇಳಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್, ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಅಧೀಕ್ಷಕ ಎಂಜಿನಿಯರ್‌ ರಾಜ್‍ಶೇಖರ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.