ADVERTISEMENT

ಅರಸೀಕೆರೆ | ಸಂಪೂರ್ಣ ನೀರಾವರಿಗೆ ಆದ್ಯತೆ: ಶಾಸಕ ಶಿವಲಿಂಗೇಗೌಡ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 5:41 IST
Last Updated 16 ಆಗಸ್ಟ್ 2025, 5:41 IST
ಅರಸೀಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು 
ಅರಸೀಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು    

ಅರಸೀಕೆರೆ: ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ಹರಿಸಿ ಸಂಪೂರ್ಣ ನೀರಾವರಿ ಕ್ಷೇತ್ರವನ್ನಾಗಿಸುವುದೇ ನನ್ನ ಪ್ರಥಮ ಆದ್ಯತೆಯಾಗಿದ್ದು ರಾಜ್ಯದಲೇ ಮಾದರಿ ಕ್ಷೇತ್ರವನ್ನಾಗಿಸುತ್ತೇನೆ ಎಂದು ಗೃಹಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ನಡೆದ 79ನೇ ಸ್ವಾತ್ರಂತ್ರ್ಯ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಹಶೀಲ್ದಾರ್‌ ಎಂ.ಜಿ.ಸಂತೋಷ್‌ಕುಮಾರ್‌ ಮಾತನಾಡಿ, ಭಾರತ ದೇಶವನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದರು.

ADVERTISEMENT

ಕ್ಷೇತ್ರದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಚಂದ್ರಶೇಖರ ಭಾರತೀ ಶಾಲೆ, ಬಸವೇಶ್ವರ ಕೋಡಿಮಠ ಶಾಲೆ, ಬಸವರಾಜೇಂದ್ರ ಡೆಮಾನ್‌ಸ್ಟ್ರೇಷನ್‌ ಶಾಲೆ, ಅನಂತ ಶಾಲೆ ಹಾಗೂ ಬೆಥನಿ ಸೆಂಟ್ರಲ್‌ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. 

ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ್‌ ಮೇಸ್ತ್ರೀ, ನಗರ ಯೋಜನ ಪ್ರಾಧಿಕಾರ ಅಧ್ಯಕ್ಷ ಬಿ.ಎಸ್.ಅರುಣ್‌ಕುಮಾರ್‌, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ಕುಮಾರ್‌, ತಾಲ್ಲೂಕು ಪಂಚಾಯಿತಿ ಇಒ ಸತೀಶ್‌, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್‌, ಡಿವೈಎಸ್‌ಪಿ ಅರುಣ್‌ಕುಮಾರ್‌, ತೋಟಗಾರಿಕಾ ಸಹಾಯಕಿ ನಿರ್ದೇಶಕಿ ಸೀಮಾ, ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ಪರಶಿವಮೂರ್ತಿ, ಯಶೋದಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.