ADVERTISEMENT

ಬೆಂಗಳೂರು–ಮೈಸೂರು,ಹುಬ್ಬಳ್ಳಿ–ಬೆಳಗಾವಿ ಮಧ್ಯೆ ಆಸ್ಟ್ರೇಲಿಯಾ ಮಾದರಿ ರಸ್ತೆ–ರೇವಣ್ಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2019, 11:16 IST
Last Updated 26 ಜನವರಿ 2019, 11:16 IST
ಎಚ್.ಡಿ.ರೇವಣ್ಣ
ಎಚ್.ಡಿ.ರೇವಣ್ಣ   

ಹಾಸನ: ಆಸ್ಟ್ರೇಲಿಯಾ ತಂತ್ರಜ್ಞಾನ ಬಳಸಿ ಬೆಂಗಳೂರು–ಮೈಸೂರು ಮತ್ತು ಹುಬ್ಬಳ್ಳಿ–ಬೆಳಗಾವಿರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

‘ಆಸ್ಟ್ರೇಲಿಯಾದಲ್ಲಿ ರಸ್ತೆಗಳು ಹಾಗೂ ಸಂಚಾರ ವ್ಯವಸ್ಥೆ ಅತ್ಯುತ್ತಮವಾಗಿದೆ. ಹೆದ್ದಾರಿ ನಿರ್ಮಾಣದ ಅತ್ಯುತ್ತಮ ವಿಧಾನ, ರಸ್ತೆ ಸುರಕ್ಷತೆ ಹಾಗೂ ಆಸ್ತಿಗಳ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಅಧ್ಯಯನ ನಡೆಸಲಾಗಿದೆ. ಈ ಕುರಿತು ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು. ಪ್ರಸಕ್ತ ಬಜೆಟ್‌ನಲ್ಲಿಯೇ ರಸ್ತೆ ನಿರ್ಮಾಣಕ್ಕೆ ಅನುದಾನ ಘೋಷಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು. ಸಾಧ್ಯವಾಗದಿದ್ದರೆ ರಾಜ್ಯ ಹೆದ್ದಾರಿಯ ₹ 4,500 ಕೋಟಿ ಅನುದಾನದಲ್ಲಿ ₹ 300 ಕೋಟಿಯನ್ನು ರಸ್ತೆ ನಿರ್ಮಾಣಕ್ಕೆ ಬಳಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಒಂದೇ ದಿನ 500 ಕಿ.ಮೀ. ಪ್ರವಾಸ ಮಾಡಿದರೂ ಆಯಾಸವಾಗುವುದಿಲ್ಲ. ಸಂಚಾರ ನಿಯಮ ಉಲ್ಲಂಘಿಸಿದರೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ, ರಸ್ತೆಗಳಲ್ಲಿ ಗುಂಡಿಗಳೇ ಇಲ್ಲ, 90 ಕಿ.ಮೀ. ವೇಗದಲ್ಲಿ ಟ್ರಕ್‌ಗಳನ್ನು ಓಡಿಸಲಾಗುತ್ತದೆ’ ಎಂದು ಹೇಳಿದರು.

ADVERTISEMENT

ನಂತರ ನಡೆದ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ, ‘ದೇವೇಗೌಡರ ಕುಟುಂಬಕ್ಕೆ ಆಪ್ತ ಎಂಬ ಕಾರಣಕ್ಕೆ ಕುರುಬ ಸಮುದಾಯದ ತಿಪ್ಪೇಸ್ವಾಮಿ ಅವರು ವಿಧಾನ ಪರಿಷತ್‌ ಸದಸ್ಯರಾಗಿ ನೇಮಕ ಮಾಡಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟಿಸಲಾಯಿತು. ಆದರೆ, ಅವರು ಎಲ್ಲಾ ಸಮುದಾಯಕ್ಕೂ ದುಡಿದಿದ್ದಾರೆ. ದುಡಿದವರನ್ನು ಗುರುತಿಸಿ, ಗೌರವಿಸಿವುದು ನಮ್ಮ ಕರ್ತವ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.