ADVERTISEMENT

ಶ್ರವಣಬೆಳಗೊಳ | ಶಾಂತಿಸಾಗರರ ಪ್ರತಿಮೆ ಅನಾವರಣ ಇಂದು; ಉಪ ರಾಷ್ಟ್ರಪತಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 2:22 IST
Last Updated 9 ನವೆಂಬರ್ 2025, 2:22 IST
<div class="paragraphs"><p>ಶ್ರವಣಬೆಳಗೊಳದ ಗೊಮ್ಮಟನಗರದ ಬಾಹುಬಲಿ ತಾಂತ್ರಿಕ ಕಾಲೇಜಿನ ಆವರಣದಲ್ಲಿ ಆಚಾರ್ಯ ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ.</p></div>

ಶ್ರವಣಬೆಳಗೊಳದ ಗೊಮ್ಮಟನಗರದ ಬಾಹುಬಲಿ ತಾಂತ್ರಿಕ ಕಾಲೇಜಿನ ಆವರಣದಲ್ಲಿ ಆಚಾರ್ಯ ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ.

   

ಶ್ರವಣಬೆಳಗೊಳ: ಇಲ್ಲಿಯ ಗೊಮ್ಮಟನಗರದ ಬಾಹುಬಲಿ ತಾಂತ್ರಿಕ ಕಾಲೇಜಿನ ಆವರಣದಲ್ಲಿ 20ನೇ ಶತಮಾನದ ಪ್ರಥಮಾಚಾರ್ಯ ಶಾಂತಿಸಾಗರ ಮಹಾರಾಜರ ಪ್ರತಿಮೆ ಅವರ ಶಿಲಾಶಾಸನ, ಪಾದುಕೆ ಮತ್ತು 4ನೇ ಬೆಟ್ಟದ ಪದನಾಮ ಅನಾವರಣ ಸಮಾರಂಭವು ನ.9ರಂದು ಬೆಳಿಗ್ಗೆ 9 ಗಂಟೆಗೆ ಕ್ಷೇತ್ರದ ಪೀಠಾಧಿಪತಿ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾರ್ಗದರ್ಶನದಲ್ಲಿ ಆಯೋಜನೆಗೊಂಡಿದೆ.

ಆಚಾರ್ಯ ಶಾಂತಿಸಾಗರ ಮಹಾರಾಜರ ಪ್ರತಿಮೆ ಗಿರಿಯ ಪದನಾಮವನ್ನು ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅನಾವರಣ ಮಾಡಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌, ಸೇರಿದಂತೆ ಗಣ್ಯಾತಿ ಗಣ್ಯರು ಭಾಗಿಯಾಗಲಿದ್ದಾರೆ.

ADVERTISEMENT

ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ‘ಮುನಿ ಪರಂಪರೆಯಲ್ಲಿ ದೇಶದಲ್ಲಿಯೇ ಶ್ರೇಷ್ಠ ಸಾಧನೆ ಮಾಡಿದ ಆಚಾರ್ಯ ಶಾಂತಿಸಾಗರ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೆ ಬರುವ ಉಪ ರಾಷ್ಟ್ರಪತಿ, ರಾಜ್ಯಪಾಲರು, ಗಣ್ಯಾತಿ ಗಣ್ಯರು ಹಾಗೂ ಭಕ್ತರನ್ನು ಸ್ವಾಗತಿಸಲು ಅಗತ್ಯ ಸಿದ್ಧತೆ ಮಾಡಲಾಗಿದೆ’ ಎಂದು ತಿಳಿಸಿದರು.

‘ಒಂದು ವಾರದಿಂದ ಜೈನ ಮಠದ ಶ್ರೀಗಳು, ಆಡಳಿತ ಮಂಡಳಿಯ ಸದಸ್ಯರು, ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿ ನಿರ್ದೇಶನದಂತೆ ಸಮನ್ವಯದಿಂದ ಈ ಅಪರೂಪದ ಧಾರ್ಮಿಕ ಸಮಾರಂಭದ ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದರು.

‘ಇಡೀ ಶ್ರವಣಬೆಳಗೊಳ ಪಟ್ಟಣದ ಪ್ರಮುಖ ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. 4ನೇ ಬೆಟ್ಟದಲ್ಲಿ ಆಚಾರ್ಯರ ಮೂರ್ತಿ, ಶಿಲಾಶಾಸನಗಳ ಪ್ರತಿಷ್ಠಾಪನೆ ಕಾರ್ಯಗಳು ಸಂಪೂರ್ಣ ಸಿದ್ಧಗೊಂಡಿವೆ’ ಎಂದು ಜೈನ ಮಠದ ಕಾರ್ಯದರ್ಶಿ ಎಸ್.ಪಿ.ಮಹೇಶ್ ತಿಳಿಸಿರುತ್ತಾರೆ.

ಏರ್ ಬಲೂನ್ ಹಾರಾಟ, ಬಳಕೆ ನಿಷೇಧ: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಭೇಟಿ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಅವರು ಪ್ರವಾಸ ಮಾಡುವ ಸ್ಥಳಗಳ 15 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ರಹಿತ ಏರ್ ಕ್ರಾಫ್ಟ್ ಹಾಗೂ ಯಾವುದೇ ಏರ್ ಬಲೂನ್‌ಗಳ ಹಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ಆದೇಶಿಸಿದ್ದಾರೆ.

ಶ್ರವಣಬೆಳಗೊಳದ ಗೊಮ್ಮಟನಗರದ ಬಾಹುಬಲಿ ತಾಂತ್ರಿಕ ಕಾಲೇಜಿನ ಆವರಣದಲ್ಲಿ ಆಚಾರ್ಯ ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ.
ಶ್ರವಣಬೆಳಗೊಳದ ಗೊಮ್ಮಟನಗರದ ಬಾಹುಬಲಿ ತಾಂತ್ರಿಕ ಕಾಲೇಜಿನ ಆವರಣದಲ್ಲಿ ಆಚಾರ್ಯ ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.