ADVERTISEMENT

ಬಾಲಕನ ತುಟಿ ಕಚ್ಚಿದ ಬಿಡಾಡಿ ನಾಯಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 15:52 IST
Last Updated 10 ಜುಲೈ 2019, 15:52 IST
   

ಹಾಸನ: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಉಸ್ಮಾನ್‌ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ.

ಸುಭಾಷ್‌ನಗರದ ರಿಜ್ವಾನ್‌ ಅವರ ಪುತ್ರ ಉಸ್ಮಾನ್ ಬುಧವಾರ ಸಂಜೆ ಸ್ನೇಹಿತರ ಜತೆ ಆಟವಾಡುತ್ತಿದ್ದ ವೇಳೆ ಬಿಡಾಡಿ ನಾಯಿ ಆತನ ತುಟಿ, ಕೆನ್ನೆ ಕಚ್ಚಿದೆ. ಗಾಬರಿಯಿಂದ ಕಿರುಚಿಕೊಂಡಾಗ ಸ್ಥಳೀಯರು ನಾಯಿಯನ್ನು ಅಲ್ಲಿಂದ ಓಡಿಸಿದ್ದಾರೆ.

ತೀವ್ರವಾಗಿ ಗಾಯಗೊಂಡ ಬಾಲಕನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಾಗ, ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಲಸಿಕೆ ಇಲ್ಲವೆಂದು ಸಿಬ್ಬಂದಿ ವಾಪಸ್‌ ಕಳುಹಿಸಿದರು. ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ADVERTISEMENT

‘ಮೂರು ದಿನಗಳ ಹಿಂದೆಯಷ್ಟೇ ಬಿಡಾಡಿ ನಾಯಿಗಳು ಮೂವರು ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ್ದವು. ಈ ಭಾಗದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದ್ದು, ನಗರಸಭೆ ಸಿಬ್ಬಂದಿ ಇದಕ್ಕೆ ಕಡಿವಾಣ ಹಾಕಬೇಕು’ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.