
ಬೇಲೂರು: ವೀರಶೈವ, ಲಿಂಗಾಯತ ಸಮುದಾಯದಲ್ಲಿ ಒಗ್ಗಟ್ಟು ಇಲ್ಲದ್ದರಿಂದ ರಾಜಕೀಯ ಕ್ಷೇತ್ರದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಹಿನ್ನಡೆ ಆಗಿದೆ ಎಂದು ಜೆಡಿಎಸ್ ಜಿಲ್ಲಾಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್ ಹೇಳಿದರು.
ಇಲ್ಲಿ ಈಚೆಗೆ ನಡೆದ ವೀರಶೈವ, ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕ ಆಯೋಜಿಸಿದ್ದ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮುದಾಯ ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ, ಬಲಾಢ್ಯ ಆಗಲು ಸಾಧ್ಯ ಎಂದರು.ನೌಕರರ ಕ್ಷೇಮಾಭಿವೃದ್ದಿಗೆ ₹1ಲಕ್ಷ ಹಣ ನೀಡುವುದಾಗಿ ತಿಳಿಸಿದರು.
ಬಿಜೆಪಿ ಮುಖಂಡ ಬೆಣ್ಣೂರು ರೇಣುಕುಮಾರ್ ಮಾತನಾಡಿ,‘ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಮಾಜಕ್ಕೆ ಶಕ್ತಿ ಇತ್ತು ಎಂದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ.ಪಾಲಾಕ್ಷ ಮಾತನಾಡಿ, ಸಮುದಾಯವು ಸಂಸ್ಕಾರವನ್ನು ಸಾರಿದ ಧರ್ಮ ಎಂದರು. ಅಖಿಲಭಾರತ ವೀರಶೈವ,ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಬಲ್ಲೇನಹಳ್ಳಿ ರವಿಕುಮಾರ್ ಮಾತನಾಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಅಡಗೂರು ಬಸವರಾಜು, ಯುವಘಟಕದ ಅಧ್ಯಕ್ಷ ಚೇತನ್, ಪ್ರಮುಖರಾದ ಗೆಂಡೇಹಳ್ಳಿ ಚೇತನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.