ADVERTISEMENT

ಬೇಲೂರು | ಕಾಮಗಾರಿ ಪರಿಶೀಲನೆ: ಶಾಸಕ ಎಚ್.ಕೆ. ಸುರೇಶ್

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 1:45 IST
Last Updated 24 ನವೆಂಬರ್ 2025, 1:45 IST
ಬೇಲೂರಿನ ಪಂಪ್‌ಹೌಸ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಹೆಚ್ಚುವರಿ ಕೊಠಡಿ ಕಾಮಗಾರಿಯನ್ನು ಶಾಸಕ ಎಚ್.ಕೆ. ಸುರೇಶ್ ಪರಿಶೀಲಿಸಿದರು‌
ಬೇಲೂರಿನ ಪಂಪ್‌ಹೌಸ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಹೆಚ್ಚುವರಿ ಕೊಠಡಿ ಕಾಮಗಾರಿಯನ್ನು ಶಾಸಕ ಎಚ್.ಕೆ. ಸುರೇಶ್ ಪರಿಶೀಲಿಸಿದರು‌   

ಬೇಲೂರು: ಇಲ್ಲಿನ ಪಂಪ್‌ಹೌಸ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಹೆಚ್ಚುವರಿ ಕೊಠಡಿ ಕಾಮಗಾರಿಗಳನ್ನು ಶಾಸಕ ಎಚ್.ಕೆ. ಸುರೇಶ್ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘₹ 3 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಯನ್ನು, ಭೂ ಸೇನಾ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿದೆ. ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಸತಿ ಶಾಲೆಗಳಿಗೆ ಹೆಚ್ಚಾಗಿ ಬರುತ್ತಿರುವುದರಿಂದ ಕೊಠಡಿಯ ಸಮಸ್ಯೆ ಇತ್ತು. ಕೊಠಡಿ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿಸಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್‌ಪೀರ್, ಸಹಾಯಕ ನಿರ್ದೇಶಕ ಲಿಂಗರಾಜು, ಎಂಜಿನಿಯರ್ ನವ್ಯಶ್ರೀ  ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.