
ಬೇಲೂರು: ‘ಸಮಾಜಕ್ಕಾಗಿ ಉತ್ತಮ ಕೆಲಸ ಮಾಡಿದಾಗ ಪತ್ರಕರ್ತನ ವೃತ್ತಿ ಸಾರ್ಥಕವಾಗುತ್ತದೆ’ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ಇಲ್ಲಿ ಭಾನುವಾರ ಸಂಜೆ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
‘ಬ್ರೇಕಿಂಗ್ ನ್ಯೂಸ್ ಹಾವಳಿಯಲ್ಲಿ ಸಾಕಷ್ಟು ಕುಟುಂಬಗಳ ಹೃದಯ ನೋಯಿಸಿದ್ದು, ಸುದ್ದಿ ನೀಡುವ ಆತುರದಲ್ಲಿ ಸತ್ಯ ಮರೆಮಾಚುವ ಅತಿರೇಕದ ಕೆಲಸ ಮಾಡಬಾರದು’ ಎಂದರು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ‘ಪತ್ರಕರ್ತರು ಸತ್ಯಕ್ಕೆ ಹತ್ತಿರವಾದ ಸುದ್ದಿ ನೀಡಬೇಕು. ಸಮಾಜಕ್ಕೆ ನ್ಯಾಯ ದೊರಕುವಂತೆ ಸುದ್ದಿ ಮಾಡಬೇಕು. ಪತ್ರಕರ್ತರ ಭವನದ ಹೆಚ್ಚುವರಿ ಕಟ್ಟಡ ನಿರ್ಮಿಸಲು ಸಹಕಾರ ನೀಡುತ್ತೇನೆ. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಹಂತ ಹಂತವಾಗಿ ₹5 ಲಕ್ಷ ನೀಡುತ್ತೇನೆ’ ಎಂದರು.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಬಿ.ಮದನ್‌ಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಬಿ.ಶಿವರಾಜ್ ಮಾತನಾಡಿದರು.
ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರವಿ ನಾಕಲಗೂಡು, ಇನ್‌ಸ್ಪೆಕ್ಟರ್ ರೇವಣ್ಣ, ರಾಜ್ಯ ಸಮಿತಿ ಸದಸ್ಯ ಕೆ.ಪಿ.ಎಸ್.ಪ್ರಮೋದ್, ಜಿಲ್ಲಾ ಘಟಕದ ಉಪಾಧ್ಯಕ್ಷ ನಂಜುಂಡೇಗೌಡ, ಪ್ರಕಾಶ್, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಲಕ್ಷ್ಮಣ್, ಎಚ್.ಡಿ.ಸಿ.ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.