ADVERTISEMENT

ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಲಿ: ಅಹಿಂದ ವರ್ಗಗಳಿಂದ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 6:47 IST
Last Updated 8 ಜನವರಿ 2026, 6:47 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಹಿಂದ ವರ್ಗಗಳ ಒಕ್ಕೂಟದಿಂದ ಬೇಲೂರಿನ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಮುಖರಾದ ಬಿ.ಎಂ. ಸಂತೋಷ್, ಬಿ. ಎಂ. ರಂಗನಾಥ ಪಾಲ್ಗೊಂಡಿದ್ದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಹಿಂದ ವರ್ಗಗಳ ಒಕ್ಕೂಟದಿಂದ ಬೇಲೂರಿನ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಮುಖರಾದ ಬಿ.ಎಂ. ಸಂತೋಷ್, ಬಿ. ಎಂ. ರಂಗನಾಥ ಪಾಲ್ಗೊಂಡಿದ್ದರು   

ಬೇಲೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಹಿಂದ ವರ್ಗಗಳ ಒಕ್ಕೂಟದಿಂದ ಇಲ್ಲಿನ ಚನ್ನಕೇಶವ ದೇವಾಲಯದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಲಾಯಿತು ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. 

ಈ ಸಂದರ್ಭದಲ್ಲಿ ಕುರುಬ ಸಂಘದ ಜಿಲ್ಲಾ ಘಟಕದ ನಿರ್ದೇಶಕ ಬಿ.ಎಂ. ಸಂತೋಷ್ ಮಾತನಾಡಿ, ಸಿದ್ದರಾಮಯ್ಯನವರು ಈ ನಾಡು ಕಂಡಂತ ಅತ್ಯಂತ ಶ್ರೇಷ್ಠ ವ್ಯಕ್ತಿಯಾಗಿದ್ದು, ಬಡವರ, ದೀನ ದಲಿತರ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದಾರೆ. ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ರಾಮಯ್ಯ ಎಂದೇ ಹೆಸರು ಮಾಡಿದ್ದಾರೆ, ಇವರ ಸೇವೆ ಹೀಗೆ ಮುಂದುವರೆಯಲಿ ಎಂದರು.

ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ಬಿ.ಎಂ. ರಂಗನಾಥ ಮಾತನಾಡಿ, ಅತ್ಯಂತ ಕಡು ಬಡತನದಿಂದ ಬಂದ ಸಿದ್ದರಾಮಯ್ಯನವರು ಎರಡು ಭಾರಿ ಮುಖ್ಯಮಂತ್ರಿಯಾಗಿ, ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವರು ಎಂದರು.

ADVERTISEMENT

ಗಾಣಿಗ ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎನ್. ಅನಂತು ಮಾತನಾಡಿ, ಸಿದ್ದರಾಮಯ್ಯನವರು ಪ್ರತಿಯೊಂದು ಸಮುದಾಯಗಳನ್ನು ಗುರುತಿಸಿ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ ಎಂದರು.

ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಕುರುಬರ ಸಂಘದ ರಾಜ್ಯಘಟಕದ ನಿರ್ದೆಶಕ ಬಿ.ಸಿ.ಹರೀಶ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎನ್.ಚಂದ್ರಶೇಖರ್ (ಪಾಪು), ವಾಲ್ಮೀಕಿ ಜನಾಂಗದ ಜಿಲ್ಲಾಘಟಕದ ಅಧ್ಯಕ್ಷ ಮಧುನಾಯಕ್, ಜಿಲ್ಲಾ ಕೆಡಿಪಿ ಸದಸ್ಯೆ ಸೌಮ್ಯ ಆನಂದ್, ಹಾಲುಮತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಕಾಂಗ್ರೆಸ್ ಮುಖಂಡ ಉಮಾಶಂಕರ್, ದಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್, ನರಸಿಂಹ, ಪುರಸಭೆ ನಾಮಿನಿ ಸದಸ್ಯ ಪ್ರಸನ್ನ, ಶರತ್, ಸುರೇಶ್, ವಿಶ್ವನಾಥ್, ರಾಕೇಶ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.