ADVERTISEMENT

‘ಗ್ಯಾರಂಟಿ’ ‌ಲೋಪವಾಗದಂತೆ ಎಚ್ಚರವಹಿಸಿ: ದೇಶಾಣಿ ಆನಂದ್

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 14:18 IST
Last Updated 28 ಏಪ್ರಿಲ್ 2025, 14:18 IST
ಬೇಲೂರಿನ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ, ಗ್ಯಾರಂಟಿ ‌ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ದೇಶಾಣಿ ಆನಂದ್ ಮಾತನಾಡಿದರು
ಬೇಲೂರಿನ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ, ಗ್ಯಾರಂಟಿ ‌ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ದೇಶಾಣಿ ಆನಂದ್ ಮಾತನಾಡಿದರು   

ಪ್ರಜಾವಾಣಿ ವಾರ್ತೆ

ಬೇಲೂರು: ಸರ್ಕಾರದ ಗ್ಯಾರಂಟಿ ‌ಯೋಜನೆಗಳು ಫಲಾನುಭವಿಗಳಿಗೆ ತಲುಪುವಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ದೇಶಾಣಿ ಆನಂದ್ ತಾಕೀತು ಮಾಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಸೋಮವಾರ ಆಯೋಜಿಸಿದ್ದ, ಗ್ಯಾರಂಟಿ ‌ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

‘ಗೃಹಲಕ್ಷ್ಮಿ ಯೋಜನೆಯಲ್ಲಿ ನಾವು ಶೇ 96ರಷ್ಟು ಪ್ರಗತಿ ಸಾಧಿಸಿದ್ದು, ಇದು ಶೇ100 ಆಗಬೇಕು. ಪಡಿತರ ವಿತರಣೆಗಾಗಿ ಇ–ಕೆವೈಸಿ ಮಾಡಿಸುವಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ತೋರುತ್ತಿದ್ದು, ತಕ್ಷಣ ಗಮನ ಹರಿಸಬೇಕು’ ಎಂದರು.

‘ಯುವನಿಧಿ ಫಲಾನುಭವಿಗಳನ್ನು ಗುರುತಿಸಲು ಕಾರ್ಯಾಗಾರ ಆಯೋಜಿಸಬೇಕು ಹಾಗೂ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಕೌಶಲ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಅವರಿಗೆ ಸೂಚಿಸಿದರು.

ನರೇಗಾ ಯೋಜನೆ ಸಹಾಯಕ ನಿರ್ದೇಶಕ ದಯಾನಂದ್, ಆಹಾರ ನಿರೀಕ್ಷಕಿ ವೀಣಾ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯೋಜಕಿ ರಮ್ಯ, ಗ್ಯಾರಂಟಿ ಯೋಜನೆಯ ಸದಸ್ಯರಾದ ಶರತ್, ವಿಶಾಲಕ್ಷಿ, ಸುರೇಶ್, ಮಹೇಶ್, ಪ್ರತಾಪ್, ನಿಶ್ಚಲ್, ಸತೀಶ್, ಮನ್ಸೂರ್ ಅಹಮ್ಮದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.