ADVERTISEMENT

ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 13:55 IST
Last Updated 10 ನವೆಂಬರ್ 2020, 13:55 IST
ಹಾಸನದ ಹೇಮಾವತಿ ಪ್ರತಿಮೆ ಎದುರು ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಹಾಸನದ ಹೇಮಾವತಿ ಪ್ರತಿಮೆ ಎದುರು ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.   

ಹಾಸನ: ರಾಜರಾಜೇಶ್ವರಿ ನಗರ ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದ ಹೇಮಾವತಿ ಪ್ರತಿಮೆ ಎದುರು ಸಿಹಿ ಹಂಚಿ ಸಂಭ್ರಮಿಸಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ಕೆ. ವೇಣುಗೋಪಾಲ್ ಮಾತನಾಡಿ, ‘ಕೋವಿಡ್‌, ಅತಿವೃಷ್ಟಿ ನಡುವೆಯೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗೆ ಎರಡೂ ಕ್ಷೇತ್ರದ ಮತದಾರರು ಮನ್ನಣೆ ನೀಡಿದ್ದಾರೆ. ಕೆ.ಆರ್ ಪೇಟೆಯಂತೆ ಶಿರಾದಲ್ಲಿಯೂ ಬಿ.ವೈ. ವಿಜಯೇಂದ್ರ ಮತ್ತು ಶಾಸಕ ಪ್ರೀತಂ ಜೆ. ಗೌಡರ ತಂತ್ರಗಾರಿಕೆ ಫಲ ನೀಡಿದೆ’ ಎಂದು ಹರ್ಷ ವ್ಯಕ್ತಪಡಿಸಿರು.

ಬಿಹಾರ ವಿಧಾನಸಭೆ ಚುನಾವಣೆಯಲ್ಲೂ ಎನ್‍ಡಿಎ ಬಹುಮತ ಗಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಬಲ ಹೆಚ್ಚಿದೆ. ಇದೇ ರೀತಿ ಮುಂದಿನ ಎಲ್ಲ ಚುನಾವಣೆಯಲ್ಲಿ ಕೇಸರಿ ಕಲರವ ಮುಂದುವರಿಯಲಿದೆ ಎಂದರು.

ADVERTISEMENT

ಬಿಜೆಪಿ ಕಾರ್ಯಕರ್ತರಾದ ವಿಕ್ರಂ, ಚಂದ್ರಶೇಖರ್, ರಾಹುಲ್ ಕಿಣಿ, ಸ್ವಾಮಿ, ಅರುಣ್, ರಮೇಶ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.