
ಪ್ರಜಾವಾಣಿ ವಾರ್ತೆ
ಆರೋಪಿ ಮುಸ್ತಾಫ ಪೈಚಾರ್
ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತಂಡ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಆನೆಮಹಲ್‌ನಲ್ಲಿ ಮೂವರನ್ನು ವಶಕ್ಕೆ ಪಡೆದಿದೆ.
ಸುಳ್ಯದ ಮೊಹಮ್ಮದ್ ಮುಸ್ತಾಫ ಅಲಿಯಾಸ್ ಮುಸ್ತಾಫ ಪೈಚಾರ್, ಸೋಮವಾರಪೇಟೆಯ ಇಲಿಯಾಸ್ ಹಾಗೂ ಸಿರಾಜ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಆನೆಮಹಲ್‌ನ ಸಿರಾಜ್ ಬಳಿ ಮೊಹಮ್ಮದ್ ಮುಸ್ತಾಫಾ ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಮುಸ್ತಾಫ ಪೈಚಾರ್ ನಾಲ್ಕನೇ ಆರೋಪಿಯಾಗಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.