ADVERTISEMENT

44 ಮಂದಿಯಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 13:14 IST
Last Updated 26 ಜೂನ್ 2025, 13:14 IST
ಕೊಣನೂರಿನ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ರಕ್ತದಾನ ಮಾಡಿದರು.
ಕೊಣನೂರಿನ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ರಕ್ತದಾನ ಮಾಡಿದರು.   


ಕೊಣನೂರು : ಕಾಂಗ್ರೆಸ್ ಮುಖಂಡ ಎಚ್.ಪಿ ಶ್ರೀಧರಗೌಡರ 44 ನೇ ಜನ್ಮದಿನದ ಅಂಗವಾಗಿ ಅಭಿಮಾನಿ ಬಳಗ ಬುಧ‌ವಾರ ಇಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ 44 ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

  ಉಚಿತ ಆರೋಗ್ಯ ಶಿಬಿರದಲ್ಲಿ 183 ಮಂದಿ  ತಪಾಸಣೆ ಮಾಡಿಸಿಕೊಂಡರು. ಉಚಿತ ಎಕೋ ಪರೀಕ್ಷೆ, ಇಸಿಜಿ, ರಕ್ತ ಪರಿಕ್ಷೆ ಮಾಡಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಿಗೆರೆ ಸೋಮಶೇಖರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ದಶರಥ, ನಗರ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಹಬಾಜ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಪ್ರವೀಣ್, ನಿತಿನ್,  ಅಭಿಮಾನಿ ಬಳಗದಸದಸ್ಯರು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.