ADVERTISEMENT

ಹಾಸನ: ಪಶು ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 17 ಮೇ 2025, 12:28 IST
Last Updated 17 ಮೇ 2025, 12:28 IST
ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.   

ಹಾಸನ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ, ಯುವ ರೆಡ್ ಕ್ರಾಸ್ ಘಟಕ, ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಆಶ್ರಯದಲ್ಲಿ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ರೆಡ್‌ ಕ್ರಾಸ್ ಸಂಸ್ಥೆ ನಿರ್ದೇಶಕ ಅಮ್ಜದ್ ಖಾನ್ ಉದ್ಘಾಟಿಸಿದರು. ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್‌ ಡಾ.ಒ.ಆರ್ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶಬ್ಬೀರ್ ಅಹ್ಮದ್, ಖಜಾಂಚಿ ಜಯೇಂದ್ರಕುಮಾರ್, ನಿರ್ದೇಶಕರಾ ಉದಯ್ ಕುಮಾರ್, ಗಿರೀಶ್, ಭೀಮರಾಜ್, ಸುಬ್ಬಸ್ವಾಮಿ, ಜಯಪ್ರಕಾಶ್, ಪಶು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ನಾಗಪ್ಪ ಮತ್ತು ಡಾ.ಶೀಲಾ ಹಾಜರಿದ್ದರು.

ಯುವ ರೆಡ್‌ ಕ್ರಾಸ್‌ ಘಟಕದ ಸಂಯೋಜಕ ಡಾ. ಹೇಮಂತ್ ಗೌಡ ನಿರೂಪಿಸಿದರು. ಹಾಸನ ರಕ್ತನಿಧಿ ಮುಖ್ಯಸ್ಥ ಕಾಂತ್‌ರಾಜ್ ನೇತೃತ್ವದಲ್ಲಿ ರಕ್ತ ಸಂಗ್ರಹಣೆ ಮಾಡಲಾಯಿತು. 47 ವಿದ್ಯಾರ್ಥಿ, ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು. ರಕ್ತದಾನಿಗಳಿಗೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರೆಡ್ ಕ್ರಾಸ್ ಚಿಹ್ನೆ ಗುರುತಿನ 50 ಕೀ ಚೈನ್ ವಿತರಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.