ADVERTISEMENT

ಅರಸೀಕೆರೆ: ಮಿದುಳು ಜ್ವರದಿಂದ ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 14:16 IST
Last Updated 31 ಜುಲೈ 2024, 14:16 IST
ಹರ್ಷಿತ್‌ ನಾಯ್ಕ್‌
ಹರ್ಷಿತ್‌ ನಾಯ್ಕ್‌   

ಅರಸೀಕೆರೆ: ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಹಾರನಹಳ್ಳಿ ತಾಂಡ್ಯದ ಹರ್ಷಿತ್‌ ನಾಯ್ಕ್‌ (11) ಬುಧವಾರ ಬೆಳಿಗ್ಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬದವರು ಡೆಂಗಿ ಜ್ವರದ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ತಿಮ್ಮರಾಜು, ಬಾಲಕ ಮಿದುಳು ಜ್ವರದಿಂದ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ. ಡೆಂಗಿ ಜ್ವರದಿಂದ ಸಾವು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‌ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್‌ ನಾಯ್ಕ್‌ 15 ದಿನಗಳಿಂದ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಶಂಕಿತ ಡೆಂಗಿ ಜ್ವರದಿಂದ ಈಚೆಗೆ ಮಾಡಾಳಿನ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದ. ಇದೀಗ ಮತ್ತೊಂದು ಸಾವು ಸಂಭವಿಸಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ADVERTISEMENT

ತಂದೆ ಇಲ್ಲದ ಹರ್ಷಿತ್‌ಗೆ ತಾಯಿಯೇ ಶಿಕ್ಷಣ ಕೊಡಿಸುತ್ತಿದ್ದರು. ಮಗನ ಉಜ್ವಲ ಭವಿಷ್ಯದ ಕನಸನ್ನು ಹೊಂದಿದ್ದರು. ಬಾಲಕನ ತಾಯಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.