ಸಕಲೇಶಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ ಮುಖಾ ಮುಖಿ ಡಿಕ್ಕಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ತಾಲ್ಲೂಕಿನ ಹಾನುಬಾಳು ಸಮೀಪದ ವೆಂಕಟಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಸಕಲೇಶಪುರ ಕಡೆಯಿಂದ ಮೂಡಿಗೆರೆ ಕಡೆಗೆ ಹಾಗೂ ಹಾನುಬಾಳು ಕಡೆಯಿಂದ ಸಕಲೇಶಪುರ ಕಡೆಗೆ ಬರುತ್ತಿದ್ದ ಬಸ್‌ಗಳು ತಿರುವಿನಲ್ಲಿ ಡಿಕ್ಕಿಹೊಡೆದಿವೆ. ಬಹುತೇಕ ಪ್ರಯಾಣಿಕರ ಮುಖ, ತುಟಿ, ಹಣೆ ಹಾಗೂ ಎದೆಗೆ ಗಾಯಗಳಾಗಿವೆ. ತಕ್ಷಣ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲಾಯಿತು. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.