ಹಳೇಬೀಡು: ಅಕ್ರಮವಾಗಿ ಗಂಡು ಕರುಗಳನ್ನು ಸಾಗಿಸುತ್ತಿದ್ದ ಬೊಲೆರೋ ಗೂಡ್ಸ್ ವಾಹನ ದ್ಯಾವಪ್ಪನಹಳ್ಳಿ ತಿರುವಿನಲ್ಲಿ ಬುಧವಾರ ರಾತ್ರಿ ಪಲ್ಟಿ ಹೊಡೆದ ಪರಿಣಾಮ 18 ಕರುಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.
ಸಣ್ಣಪುಟ್ಟ ಗಾಯಗಳೊಂದಿಗೆ ಬದುಕಿರುವ 23 ಕರುಗಳನ್ನು ಮತ್ತೊಂದು ವಾಹನದಲ್ಲಿ ಸಾಗಿಸಿ ಲಿಂಗಪ್ಪನ ಕೊಪ್ಪಲು ಸರ್ಕಾರಿ ಶಾಲೆ ಆವರಣದಲ್ಲಿ ಆರೈಕೆ ಮಾಡಲಾಗುತ್ತಿದೆ.
ಅಪಘಾತದ ಬಳಿಕ ಚಾಲಕ ಮತ್ತು ಜತೆಯಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಅತಿವೇಗವಾಗಿ ಚಲಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ.
ಸಹಾಯಕ ಪಶು ನಿರ್ದೆಶಕ ಗಂಗಾಧರ ನಾಯ್ಕ, ಪಶು ವೈದ್ಯಾಧಿಕಾರಿ ಡಾ.ವಿನಯ್ ಮತ್ತು ಸಿಬ್ಬಂದಿ ಕರುಗಳ ಮರಣೋತ್ತರ ಪರೀಕ್ಷೆ ನಡೆಸಿದರು.
ಬಳಿಕ ಹಳೇಬೀಡು ಬಿದುರು ಕೆರೆಯಲ್ಲಿ ಕರುಗಳ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಿಎಸ್ಐ ಗಿರಿಧರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.