ADVERTISEMENT

ಶಿರಾಡಿ ಘಾಟ್‌ನಲ್ಲಿ ಕಾರು ಲಾರಿ ಡಿಕ್ಕಿ, ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 15:22 IST
Last Updated 9 ಸೆಪ್ಟೆಂಬರ್ 2024, 15:22 IST
ಸಕಲೇಶಪುರದ ಶಿರಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಎರಡು ಕಾರುಗಳು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿರುವುದು
ಸಕಲೇಶಪುರದ ಶಿರಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಎರಡು ಕಾರುಗಳು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿರುವುದು   

ಸಕಲೇಶಪುರ: ಶಿರಾಡಿಘಾಟ್‌ನ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿ ನಾಯಕನಹಳ್ಳಿ ಚಂದ್ರೇಗೌಡ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡರು.

ಗಾಯಗೊಂಡ ಶೈಲಾ ಹಾಗೂ ಕಿರಣ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳಿಸಲಾಗಿದೆ.

ಧರ್ಮಸ್ಥಳದಿಂದ ತಮ್ಮ ಊರಿನ ಕಡೆಗೆ ಪ್ರಯಾಣ ಮಾಡುತ್ತಿದ್ದ ಚಂದ್ರೇಗೌಡ ಅವರ ಕಾರಿಗೆ ಎದುರು ಬಂದ ಲಾರಿ ಡಿಕ್ಕಿ ಹೊಡೆದಿದೆ. ಕಾರಿನ ಹಿಂದೆ ಬರುತ್ತಿದ್ದ ಮತ್ತೊಂದು ಕಾರು ಸಹ ಹಿಂಭಾಗದಿಂದ ಡಿಕ್ಕಿ ಹೊಡೆದಿರುವುದಾಗಿ ಗ್ರಾಮಾಂತರ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.