ADVERTISEMENT

ಹಾಸನ: ಮರಕ್ಕೆ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 3:03 IST
Last Updated 20 ಜನವರಿ 2021, 3:03 IST

ಚನ್ನರಾಯಪಟ್ಟಣ: ಪಟ್ಟಣದ ಹೊರಭಾಗದ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಂಗಳವಾರ ಮುಂಜಾನೆ ರಸ್ತೆ ಪಕ್ಕದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರಿನ ಕೆ.ಆರ್. ಪುರಂ ದೇವರಾಜು (39) ಮೃತ ವ್ಯಕ್ತಿ. ಘಟನೆಯಲ್ಲಿ ಗಾಯಗೊಂಡಿರುವ ಕಾರಿನ ಚಾಲಕ ಮಧುಕಿರಣ್, ಕೇಶವಯ್ಯ, ಶ್ರೀನಿಧಿ ಹಾಗೂ ನಾಗರಾಜು, ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರು ಸ್ನೇಹಿತರು ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.