ADVERTISEMENT

ಕಾರು ಡಿಕ್ಕಿ: ಮನೆ ಮೇಲೆ ಉರುಳಿದ ಮರ

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 2:36 IST
Last Updated 3 ಜನವರಿ 2021, 2:36 IST
ಅರಕಲಗೂಡು ಸಮೀಪದ ಅಂಕನಾಯಕನಹಳ್ಳಿ ಗ್ರಾಮದಲ್ಲಿ ಕಾರು ಗುದ್ದಿ ಮನೆಯ ಮೇಲೆ ಉರುಳಿ ಬಿದ್ದಿರುವ ತೆಂಗಿನ ಮರ
ಅರಕಲಗೂಡು ಸಮೀಪದ ಅಂಕನಾಯಕನಹಳ್ಳಿ ಗ್ರಾಮದಲ್ಲಿ ಕಾರು ಗುದ್ದಿ ಮನೆಯ ಮೇಲೆ ಉರುಳಿ ಬಿದ್ದಿರುವ ತೆಂಗಿನ ಮರ   

ಅರಕಲಗೂಡು: ಕಾರು ಗುದ್ದಿ ತೆಂಗಿನ ಮರ ಮನೆಯ ಮೇಲೆ ಉರುಳಿ ಬಿದ್ದ ಘಟನೆ ಸಮೀಪದ ಅಂಕನಾಯಕನ ಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕೆ.ಆರ್. ನಗರದಿಂದ ಹಾಸನಕ್ಕೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಗುದ್ದಿ ಸ್ವಾಮಿಗೌಡ ಅವರ ಮನೆಯ ಮೇಲೆ ಉರುಳಿ ಬಿದ್ದಿದೆ. ಇದರಿಂದ ಹೆಂಚುಗಳು ಮನೆಯಲ್ಲಿ ಮಲಗಿದ್ದ ಲಕ್ಷ್ಮಮ್ಮ ಅವರ ಮೇಲೆ ಬಿದ್ದು ಸಣ್ಣ ಪುಟ್ಟಗಾಯಗಳಾಗಿವೆ. ನಂತರ ಕಾರುವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಕಂಬವೂ ಮುರಿದು ಬಿದ್ದಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.