ಸಾವು
(ಪ್ರಾತಿನಿಧಿಕ ಚಿತ್ರ)
ಸಕಲೇಶಪುರ: ತಾಲ್ಲೂಕಿನ ಬಾಗೆ ಗ್ರಾಮದ ಅರಸುನಗರ ಸಮೀಪ ರಸ್ತೆ ಮೇಲೆ ನಿಂತಿದ್ದ ನೀರು ಕಾಣದೇ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ಅಭಿಷೇಕ್ (27) ಹಾಗೂ ಶರತ್ (28) ಮೃತಪಟ್ಟಿದ್ದು, ರಾಜಶೇಖರ್ ಮತ್ತು ಸಂದೀಪ್ ಗಾಯಗೊಂಡಿದ್ದಾರೆ.
ಬೆಂಗಳೂರಿನ ನಾಲ್ವರು ಯುವಕರು ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆ ಮಧ್ಯದಲ್ಲಿ ನೀರು ನಿಂತಿದ್ದು, ನೀರಿನ ಮೇಲೆ ಹಾದು ಹೋಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದೆ. ನಂತರ ರಸ್ತೆ ಬದಿಯ ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.