ADVERTISEMENT

ಹಾಸನ: ಡಿಕೆಶಿ ಆಪ್ತ ಸಚಿನ್ ನಾರಾಯಣ್ ಮನೆ ಮೇಲೆ ಸಿಬಿಐ ದಾಳಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 7:11 IST
Last Updated 5 ಅಕ್ಟೋಬರ್ 2020, 7:11 IST
ಸಚಿನ್‌ ನಾರಾಯಣ್‌ ನಿವಾಸ
ಸಚಿನ್‌ ನಾರಾಯಣ್‌ ನಿವಾಸ   

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಸಚಿನ್ ನಾರಾಯಣ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿ.ಎಂ ರಸ್ತೆ ಸಿಲ್ವರ್ ಜ್ಯುಬಿಲಿ ಪಾರ್ಕ್ ಬಳಿಯಿರುವ ಮನೆ ಮೇಲೆಐದು ಅಧಿಕಾರಿಗಳ ತಂಡ
ಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.

ದಾಳಿ ವೇಳೆ ಸಚಿನ್ ನಾರಾಯಣ ಮನೆಯಲ್ಲಿ ಇಲ್ಲದ ಕಾರಣ ಅವರ ಸಹೋದರ ಚೇತನ್ ನಾರಾಯಣ್ ಅವರಿಂದ ಮಾಹಿತಿ ಪಡೆಯುತ್ತಿದ್ದಾರೆ. ಮನೆಯಲ್ಲಿರುವ ಕುಟುಂಬದ ಸದಸ್ಯರಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ADVERTISEMENT

ದಾಳಿ ಖಂಡಿಸಿ ಜಿಲ್ಲಾ‌ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.