ADVERTISEMENT

ನೋಂದಣಿ ವಿಸ್ತರಿಸುವಂತೆ ಕೇಂದ್ರದ ಮೇಲೆ ಒತ್ತಡ: ಶಾಸಕ ಸಿ.ಎನ್ ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 14:21 IST
Last Updated 9 ಫೆಬ್ರುವರಿ 2024, 14:21 IST
ಶಾಸಕ ಸಿಎನ್ ಬಾಲಕೃಷ್ಣ
ಶಾಸಕ ಸಿಎನ್ ಬಾಲಕೃಷ್ಣ   

ನುಗ್ಗೇಹಳ್ಳಿ: ಕೇವಲ 5 ದಿನಗಳಲ್ಲೇ 62 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ನೋಂದಣಿ ಪೂರ್ಣಗೊಂಡಿದೆ. ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರ 54 ಸಾವಿರ ಮೆಟ್ರಿಕ್ ಟನ್‌ಗೆ ಅವಕಾಶ ಮಾಡಿಕೊಟ್ಟಿತ್ತು. ಈ ವರ್ಷ 62 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಕೇಂದ್ರ ಸರ್ಕಾರ ಆದೇಶ ಮಾಡಿತ್ತು, ಆದರೆ ರಾಜ್ಯದಲ್ಲಿ ಇನ್ನೂ 43 ಸಾವಿರ ಮೆಟ್ರಿಕ್ ಟನ್ ನಷ್ಟು ಕೊಬ್ಬರಿ ರೈತರ ದಾಸ್ತಾನು ಇದೆ. ತಾಲ್ಲೂಕಿನಲ್ಲಿ ಸುಮಾರು 5 ಸಾವಿರ ರೈತರು ನೋಂದಣಿಯಿಂದ ವಂಚಿತರಾಗಿದ್ದಾರೆ.

ಈ ಬಗ್ಗೆ ನಿನ್ನೆ ರಾತ್ರಿಯೇ ಸಂಸತ್ ಅಧಿವೇಶನದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೊಬ್ಬರಿ ಬೆಳೆಗಾರರ ಹಿತ ಕಾಪಾಡುವ ದೃಷ್ಟಿಯಿಂದ ಪುನ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಲಾಗುತ್ತದೆ. ತಾಲ್ಲೂಕಿನ ರೈತರು ಸಂಯಮದಿಂದ ಇರುವಂತೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT