
ಕೊಣನೂರು: ರಾಜ್ಯದ ತಂಬಾಕು ಬೆಳೆಗಾರರು ಬೆಲೆಯಲ್ಲಿನ ತಾರತಮ್ಯ ಮತ್ತು ಇತರೆ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಕೇಂದ್ರ ತಂಬಾಕು ಮಂಡಳಿಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚಿಸಿ ಶೀಘ್ರದಲ್ಲಿ ಸಮಸ್ಯೆಯ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಮುಂದಾಗುವುದಾಗಿ ಕೇಂದ್ರ ಸಚಿವರ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.
ರಾಮನಾಥಪುರ ಹೋಬಳಿಯ ಬಸವಾಪಟ್ಟಣದ ಮೂಲಕ ದೊಡ್ಡಮಗ್ಗೆ ಹೋಬಳಿಯ ಕೊಡಕಹಳ್ಳಿ ಗ್ರಾಮದ ದೇವಾಲಯ ಉದ್ಘಾಟನೆಗೆ ತೆರಳುವ ವೇಳೆ ರೈತರೊಬ್ಬರ ಮನವಿಗೆ ಪ್ರತಿಕ್ರಿಯಿಸಿದ ಅವರು, ತಂಬಾಕು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಸಮಯಾವಕಾಶ ಬೇಕಿದೆ ಎಂದರು.
ಜೆ.ಡಿ.ಎಸ್ ಕಾರ್ಯಕರ್ತರು, ಜನತಾದಳದ ಯುವ ಬ್ರಿಗೇಡ್ ತಾಲ್ಲೂಕು ಅಧ್ಯಕ್ಷ ಎಸ್.ಆರ್ .ರಮೇಶ್, ಮುಖಂಡ ನಿರ್ವಾಣೆಗೌಡ, ಬಿ.ಜೆ.ಕುಮಾರ್, ಗಣೇಶ್, ರೂಪೇಶ್ ಸೇರಿದಂತೆ ಹಲವಾರು ಕಾರ್ಯಕರ್ತರು ಶಾಲು ಹೊದಿಸಿ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು. ಶಾಸಕ ಎ.ಮಂಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.