ಅರಸೀಕೆರೆ: ಐತಿಹಾಸಿಕ ಹಿನ್ನೆಲೆಯುಳ್ಳ ಹೊಯ್ಸಳರ ಕಾಲದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯವು ಶಿವರಾತ್ರಿ ಹಬ್ಬಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ನೀಲಕಂಠ ಸ್ವಾಮಿ ತಿಳಿಸಿದರು.
ದೇವಾಲಯದ ಆವರಣ ಹಾಗೂ ಒಳಾಂಗಣದಲ್ಲಿ ಸ್ವಚ್ಛತಾ ಕಾರ್ಯ ಮೂರು ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ, ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ, ದೇವಾಲಯದ ಆಡಳಿತ ಮಂಡಳಿಯಿಂದ ದೇವರ ದರ್ಶನಕ್ಕೆ ಸೂಕ್ತ ಸಾಲಭ್ಯ ಕಲ್ಪಿಸಲಾಗಿದೆ. ಶಿವರಾತ್ರಿ ನಿಮಿತ್ತ ಚಂದ್ರಮೌಳೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ ಎಂದರು.
ವ್ಯಾಪಾರ ವಹಿವಾಟು ಜೋರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಗ್ರಂಥಾಲಯ ರಸ್ತೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯಿತು, ಶಿವ ಪೂಜೆಗೆ ಅತ್ಯವಶ್ಯಕವಾದ ವಸ್ತುಗಳು ಸೇರಿದಂತೆ ಹಣ್ಣು ಹೂವು ತೆಂಗಿನ ಕಾಯಿ ವ್ಯಾಪಾರ ಜೋರಾಗಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.