ಬೇಲೂರಿನಲ್ಲಿ ಜಯಕರ್ನಾಟಕ ಸಂಘಟನೆ ಆಯೋಜಿಸಿದ್ದ ಸಾಂಸ್ಕೃತಿಕ ಹಬ್ಬದಲ್ಲಿ ಪುರಸಭೆ ಸದಸ್ಯೆ ರತ್ನಮ್ಮ, ಜಯಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಪೌರ ಕಾರ್ಮಿಕ ವಿಶ್ವನಾಥ್, ಚನ್ನಕೇಶವ ದೇಗುಲದ ಅಡ್ಡೆಗಾರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.
ಬೇಲೂರು: ಚನ್ನಕೇಶವ ದೇಗುಲ ಸಾಕಷ್ಟು ವೈಶಿಷ್ಟ್ಯಗಳನ್ನು ಹೊಂದಿದೆ. ಇತಂಹ ಸ್ಥಳದಲ್ಲಿ ವಾಸಿಸುತ್ತಿರುವವರು ಧನ್ಯರು ಎಂದು ದೇಗುಲದ ಆಡಳಿತಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಹೇಳಿದರು.
ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಯಕರ್ನಾಟಕ ಸಂಘಟನೆ ತಾಲ್ಲೂಕು ಘಟಕ ಆಯೋಜಿಸಿದ್ದ, 14 ನೇ ವರ್ಷದ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಲ್ಪಕಲೆಗೆ ಹೆಸರಾದ ದೇಗುಲದಲ್ಲಿ ಜಾತ್ರೆ ಸಮಯದಲ್ಲಿ ನಡೆಯುತ್ತಿರುವ ಪೂಜಾ ವಿಧಿಗಳಿಂದ ಭಕ್ತಿಯ ಪರಾಕಾಷ್ಠೆಗೆ ಸಿಲುಕಿದೆ ಎಂದರು.
ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಮಾತನಾಡಿ, ಜಯ ಕರ್ನಾಟಕ ಸಂಘಟನೆ ನಾಡು,ನುಡಿ, ನೆಲ, ಜಲದ ವಿಚಾರದಲ್ಲಿ ಸಾಕಷ್ಟು ಹೋರಾಟ ನಡೆಸಿದೆ ಎಂದರು. ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಂ.ರಾಜು ಮಾತನಾಡಿ, ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಸಂಘಟನೆ ಹಾಸನದಲ್ಲಿ ಐದು ದಿನ ಧರಣಿ ನಡೆಸಿ ಆನೆಗಳನ್ನು ಸ್ಥಳಾಂತರ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿತ್ತು, ಅರಣ್ಯ ಇಲಾಖೆ ಕೇವಲ 3 ಆನೆಗಳನ್ನು ಹಿಡಿದಿದ್ದು, ಎಲ್ಲಾ ಆನೆಗಳನ್ನು ಹಿಡಿಯಬೇಕು ಎಂದು ಒತ್ತಾಯಿಸಿದರು.
ಪುರಸಭೆ ಸದಸ್ಯೆ ರತ್ನಮ್ಮ, ಜಯಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಪೌರ ಕಾರ್ಮಿಕ ವಿಶ್ವನಾಥ್, ಚನ್ನಕೇಶವ ದೇಗುಲದ ಅಡ್ಡೆಗಾರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.
ತಹಶೀಲ್ದಾರ್ ಎಂ.ಮಮತಾ, ಜೆಡಿಎಸ್ ಮುಖಂಡ ಬಿ.ಡಿ.ಚಂದ್ರೆಗೌಡ ಮಾತನಾಡಿದರು. ವಿದ್ಯಾವಿಕಾಸ್ ಕಾಲೇಜು ಪ್ರಾಂಶುಪಾಲ ಎಂ.ಎಂ.ರಮೇಶ್, ಮೀನುಗಾರರ ಸಹಕಾರ ಮಂಡಳಿ ಅಧ್ಯಕ್ಷ ತೌಫಿಕ್, ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಅರ್ಬನ್ ಬ್ಯಾಂಕ್ ಅಧ್ಯಕ್ಷ ಪೈಂಟ್ ರವಿ, ಸಂಘಟನೆ ಪದಾಧಿಕಾರಿಗಳಾದ ಎಂ.ಕೆ.ಆರ್ ಸೋಮೇಶ್, ಐ.ಎನ್.ಅರುಣ್ ಕುಮಾರ್, ಬಿ.ಎಲ್.ಲಕ್ಷ್ಮಣ್, ಅಕ್ಕಿರಾಜು, ಜಯಂತಿ, ನಾರ್ವೆ ಮಲ್ಲಿಕಾರ್ಜುನ, ಗುರು, ವಿನಯ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.