ಚನ್ನರಾಯಪಟ್ಟಣ: ‘ತಾಲ್ಲೂಕಿನಲ್ಲಿ ರೌಡಿಗಳ ಹಾವಳಿ ನಿಯಂತ್ರಿಸಲಾಗುವುದು’ ಎಂದು ಡಿವೈ ಎಸ್ಪಿ ಕುಮಾರ್ ತಿಳಿಸಿದರು.
ಪಟ್ಟಣದಲ್ಲಿ ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೌಡಿಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಇದೆ. ಅದನ್ನು ಕಾನೂನಿನ ಮೂಲಕ ನಿವಾರಿಸಲಾಗುವುದು. ತಾಲ್ಲೂಕಿನಲ್ಲಿ ರೌಡಿಗಳ ಚಟುವಟಿಕೆಗಳು ಪುನಾರವರ್ತನೆಯಾಗಲು ಬಿಡುವುದಿಲ್ಲ. ಪೊಲೀಸರ ಪ್ರಯತ್ನದ ಜತೆಗೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ’ ಎಂದರು.
‘ತಾಲ್ಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗೆಗಳು ಕಂಡು ಬಂದಲ್ಲಿ ಪೊಲೀಸರಿಗೆ ವಿಷಯ ತಿಳಿಸಬೇಕು’ ಎಂದರು.
‘ಶಾಲಾ- ಕಾಲೇಜುಗಳ ಆರಂಭದ ಸಮಯ ಮತ್ತು ಸಂಜೆ ವೇಳೆಯಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ. ಬಸ್ ನಿಲ್ದಾಣ, ಮೈಸೂರು ರಸ್ತೆ ಸೇರಿ ಇನ್ನಿತರೆ ಸ್ಥಳಗಳಲ್ಲಿ ಪೊಲೀಸರು ಸಂಚರಿಸಲಿದ್ದಾರೆ’ ಎಂದ ಅವರು, ‘ಪಟ್ಟಣದಲ್ಲಿ ವಾಹನಗಳ ಸುಗಮ ಸಂಚಾರ ಕಾರಣ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಸೂಕ್ತ ಜಾಗದಲ್ಲಿ ವಾಹನಗಳ ನಿಲುಗಡೆ ಮಾಡಬೇಕು. ಮೋಟರ್ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರದ ವಾಹನಗಳ ಚಾಲಕರು ಸೀಟ್ ಬೆಲ್ಟ್ ಧರಿಸಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.