ಅರಸೀಕೆರೆ: ಇಲ್ಲಿನ ನಗರಸಭೆ ನೌಕರರು ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಗುರುವಾರ ಮುಷ್ಕರ ನಡೆಸಿದರು.
ನಗರಸಭಾ ಕಾರ್ಯಾಲಯದ ಆವರಣದಲ್ಲಿ ಜಮಾಯಿಸಿದ ನೌಕರರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಪೌರ ನೌಕರರ ಸಂಘದ ಖಂಜಾಚಿ ಜಮೀಲ್ ಮಾತನಾಡಿ, ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗಿದೆ. ಈಡೇರಿಸದಿದ್ದಲ್ಲಿ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟವಧಿ ಮುಷ್ಕರ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
ನಗರಸಭಾ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಾದ್ಯಂತ ಪೌರ ನೌಕರರು ಮುಷ್ಕರ ನಡೆಸುತ್ತಿದ್ದಾರೆ, ಸಾರ್ವಜನಿಕರು ಸಹಕರಿಸಬೇಕು ಎಂದರು.
ನಗರಸಭೆ ಪ್ರಥಮ ದರ್ಜೆ ಸಹಾಯಕಿ ಅನಿತಾ ,ವ್ಯವಸ್ಥಾಪಕರು ಕಲಾವತಿ ,ಎಂ ಜಿನಿಯರ್‌ಗಳಾದ ರವಿಕುಮಾರ್ , ಸುನೀಲ್ ಕುಮಾರ್ , ಕಂದಾಯ ಅಧಿಕಾರಿ ಮಂಜುನಾಥ್, ರೇವಣಸಿದ್ದಪ್ಪ, ಲಿಂಗರಾಜು , ಸಿಬ್ಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.