ADVERTISEMENT

ಅರಣ್ಯ ಭೂಮಿ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 7:40 IST
Last Updated 12 ಆಗಸ್ಟ್ 2021, 7:40 IST
ಹೊಳೆನರಸೀಪುರ ತಾಲ್ಲೂಕಿನ ಅರೇಹಳ್ಳಿ ಸಮೀಪ ಒತ್ತುವರಿ ಆಗಿದ್ದ ಅರಣ್ಯ ಪ್ರದೇಶವನ್ನು ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್, ಡಿವೈಎಸ್‌ಪಿ ಲಕ್ಷ್ಮೇಗೌಡ ಹಾಗೂ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ತೆರವುಗೊಳಿಸಿದರು
ಹೊಳೆನರಸೀಪುರ ತಾಲ್ಲೂಕಿನ ಅರೇಹಳ್ಳಿ ಸಮೀಪ ಒತ್ತುವರಿ ಆಗಿದ್ದ ಅರಣ್ಯ ಪ್ರದೇಶವನ್ನು ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್, ಡಿವೈಎಸ್‌ಪಿ ಲಕ್ಷ್ಮೇಗೌಡ ಹಾಗೂ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ತೆರವುಗೊಳಿಸಿದರು   

ಹೊಳೆನರಸೀಪುರ: ತಾಲ್ಲೂಕಿನ ಅರೇಹಳ್ಳಿ ಸಮೀಪ ಸರ್ವೆ ನಂ. 9ರಲ್ಲಿ ಒತ್ತುವರಿಗೊಂಡಿದ್ದ 5.20 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ತೆರವುಗೊಳಿಸಿದರು.

ತಾಲ್ಲೂಕು ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್, ಡಿವೈಎಸ್ಪಿ ಬಿ.ಬಿ.ಲಕ್ಷ್ಮೇಗೌಡ ನೇತೃತ್ವದಲ್ಲಿ ಒತ್ತುವರಿ ಜಾಗವನ್ನು ತೆರವುಗೊಳಿಸಿದರು. ನಂತರ ಜೆಸಿಬಿಯಿಂದ ಸಮತಟ್ಟು ಮಾಡಿ, ಗಡಿ ಗುರುತು ಮಾಡಿದರು.

ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್ ಮಾತನಾಡಿ, ‘ಅರಣ್ಯ ಪ್ರದೇಶಗಳ ಒತ್ತುವರಿ ಅಥವಾ ನಾಶದಿಂದ ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳಿಗೆ ಬರುತ್ತಿವೆ. ಮತ್ತು ಪರಿಸರದಲ್ಲಿ ತಾಪಮಾನ ಹೆಚ್ಚುತ್ತಿದೆ. ಆದ್ದರಿಂದ ಅರಣ್ಯ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿದ್ದೇವೆ’ ಎಂದರು.

ADVERTISEMENT

ಹಳ್ಳಿಮೈಸೂರು ಪಿಎಸ್‌ಐ ಅಶ್ವಿನಿ ನಾಯಕ್, ಎಎಸ್‌ಐ ನಾಗರಾಜು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.