ADVERTISEMENT

ಸಿಎಂ ಅಣಕು ಶವಯಾತ್ರೆ; ಪ್ರತಿಕೃತಿ ದಹನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 6:41 IST
Last Updated 6 ಡಿಸೆಂಬರ್ 2020, 6:41 IST
ಹೊಳೆನರಸೀಪುರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕೃತಿ ಸಟ್ಟು ಆಕ್ರೋಶ ವ್ಯಕ್ತಪಡಿಸಿದರು
ಹೊಳೆನರಸೀಪುರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕೃತಿ ಸಟ್ಟು ಆಕ್ರೋಶ ವ್ಯಕ್ತಪಡಿಸಿದರು   

ಹೊಳೆನರಸೀಪುರ: ಕರ್ನಾಟಕ ಬಂದ್‌ ಪ್ರಯುಕ್ತ ಪಟ್ಟಣದ ಮಹಾತ್ಮ ಗಾಂಧಿವೃತ್ತದಲ್ಲಿ ಕರವೇ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಣಕು ಶವಯಾತ್ರೆನಡೆಸಿ, ಪ್ರತಿಕೃತಿ ದಹಿಸಿರಸ್ತೆ ತಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಡಾ. ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು ಪೇಟೆ ಮುಖ್ಯರಸ್ತೆ ಹಾಗೂ ಮಹಾತ್ಮ ಗಾಂಧಿವೃತ್ತ ಮುಖಾಂತರ ಸಾಗಿ ತಾಲ್ಲೂಕು ಕಚೇರಿಗೆ ಸಾಗಿ ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್‌ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಓಹಿಲೇಶ್ ಮಾತನಾಡಿ, ‘ಕೋವಿಡ್‌ನಿಂದಾಗಿ ರಾಜ್ಯದ ಜನರ ಜೀವನ ಜರ್ಜರಿತವಾಗಿರುವಾಗ ಸ್ವಾಭಿಮಾನಿ ಕನ್ನಡಿಗರ ತಾಳ್ಮೆಗೆ ಕಿಚ್ಚು ಇಡುವಂತೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿ, ಕನ್ನಡಾಂಬೆ, ನಾಡಿನ ನೆಲ, ಜಲ ಹಾಗೂ ಭಾಷೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವಮಾನ ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ರಾಜಕಾರಣಕ್ಕಾಗಿ ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟನ್ನು ನೀಡಿ, ಜನತೆಗಳ ನಡುವೆ ಸಂಘರ್ಷ ಉಂಟು ಮಾಡಿ ಸಾಮರಸ್ಯಕ್ಕೆ ಕಿಚ್ಚನ್ನು ಹಚ್ಚುವ ಕೆಲಸದಲ್ಲಿ ತೊಡಗಿರುವ ರಾಜ್ಯ ಸರ್ಕಾರದ ಆಡಳಿತ ಮುಂದಿನ ದಿನಗಳಲ್ಲಿ ಬಾರಿ ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಕರವೇ ಸಂಚಾಲಕರಾದ ರಂಗಸ್ವಾಮಿ, ನವೀನ್, ಸುಪ್ರಿತ್ ಪಾಸ್ವಾನ್, ರೇವಣ್ಣ, ಪುನೀತ್, ಮನು, ವೆಂಕಟಸ್ವಾಮಿ, ಅಶೋಕ್, ನಾಗರಾಜು ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.