ಹಾಸನ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಮನೆಗೆ ತೆರಳಿ ಭೇಟಿ ಆಗಿರುವುದರಲ್ಲಿ ವಿಶೇಷವೇನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಇದಕ್ಕೆ ರಾಜಕೀಯ ಬೆರೆಸುವ ಅಗತ್ಯವಿಲ್ಲ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವರು ನಮ್ಮ ಮನೆಗೆ ಬರುತ್ತಾರೆ. ನಾನು ಡಾ.ಪರಮೇಶ್ವರ್ ಮನೆಗೆ ಹೋಗುತ್ತೇನೆ. ಇವು ಸಹಜ ಸಂಪರ್ಕಗಳು. ರಾಜಕೀಯದಲ್ಲಿ ಯಾರೂ ಶತ್ರುವಲ್ಲ; ಮಿತ್ರರೂ ಇರುವುದಿಲ್ಲ. ರಾಜಕಾರಣ ಯಾವಾಗಲೂ ಒಂದೇ ರೀತಿ ಇರುವುದಿಲ್ಲ. ಬದಲಾವಣೆ ಆಗುತ್ತಲೇ ಇರುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.