ADVERTISEMENT

ಕಂಪ್ಯೂಟರ್ ತರಬೇತಿ, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲೂ ಕಲಿಕೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 3:57 IST
Last Updated 6 ಜುಲೈ 2022, 3:57 IST
ಬೇಲೂರಿನ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ವಾರ್ಡನ್ ಸಾಕಮ್ಮ, ಕಂಪ್ಯೂಟರ್ ಶಿಕ್ಷಕಿ ಶಾಲಿನಿ ಇದ್ದಾರೆ.
ಬೇಲೂರಿನ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ವಾರ್ಡನ್ ಸಾಕಮ್ಮ, ಕಂಪ್ಯೂಟರ್ ಶಿಕ್ಷಕಿ ಶಾಲಿನಿ ಇದ್ದಾರೆ.   

ಬೇಲೂರು: ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ತಂಗಲು ಇರುವ ಮೂಲಸೌಕರ್ಯಗಳ ಜೊತೆಗೆ, ಕಲಿಕೆಗೂ ಉತ್ತಮ ಸೌಕರ್ಯ ಒದಗಿಸಲಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ 200 ವಿದ್ಯಾರ್ಥಿನಿಯರಿದ್ದು, ಇವರಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾ ಸಾಮಗ್ರಿ, ಸೋಲಾರ್ ಬಿಸಿನೀರಿನ ವ್ಯವಸ್ಥೆ, ಉತ್ತಮವಾದ ಹಾಸಿಗೆ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಜೊತೆಗೆ ಹಾಸ್ಟೆಲ್‌ನಲ್ಲಿ ಈ ವರ್ಷದಿಂದ ಕಂಪ್ಯೂಟರ್ ಶಿಕ್ಷಣವನ್ನೂ ನೀಡಲಾಗುತ್ತಿದೆ, ಒಟ್ಟು 20 ಕಂಪ್ಯೂಟರ್‌ಗಳಿದ್ದು, ಹೈಸ್ಪಿಡ್ ನೆಟ್ ಸಂಪರ್ಕ ಕೊಡಿಸಲಾಗಿದೆ, ಒಬ್ಬರು ಕಂಪ್ಯೂಟರ್ ಶಿಕ್ಷಕಿಯನ್ನು ನೇಮಿಸಿಕೊಳ್ಳಲಾಗಿದೆ. ಪ್ರತಿದಿನ ಮೂರು ಬ್ಯಾಚ್‌ಗಳಲ್ಲಿ ವಿದ್ಯಾರ್ಥಿನಿಯರಿಗೆ ತರಗತಿ ನಡೆಸುತ್ತಿದ್ದಾರೆ. ಒಂದು ಬ್ಯಾಚ್‌ನಲ್ಲಿ ವಿದ್ಯಾರ್ಥಿನಿಯರು ಪ್ರಾಜೆಕ್ಟ್ ವರ್ಕ್, ಪ್ರಿಂಟ್ ಮತ್ತು ಶಿಕ್ಷಣಕ್ಕೆ ಬೇಕಾದ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ADVERTISEMENT

ಭಾನುವಾರ ದಿನ ಪೂರ್ತಿ ಕಂಪ್ಯೂಟರ್ ಉಪಯೋಗಿಸಿಕೊಳ್ಳುವ ಅವಕಾಶ ನೀಡಲಾಗಿದೆ. ವಿದ್ಯಾರ್ಥಿನಿಯರು ಶಿಕ್ಷಣದ ಅವಶ್ಯಕತೆಗೆ ಮಾತ್ರ ಕಂಪ್ಯೂಟರ್ ಉಪಯೋಗಿಸಿಕೊಳ್ಳುವಂತೆ ಎಚ್ಚರ ವಹಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಕ್ಲಾಸ್ ನೀಡಲಾಗುತ್ತಿದೆ. ಇದಕ್ಕೆ ಬೇಕಾದ ಗುಣಮಟ್ಟದ ಸ್ಮಾರ್ಟ್ ಕ್ಲಾಸ್ ಪರದೆಯನ್ನು ಹಾಕಲಾಗಿದೆ. ಗ್ರಂಥಾಲಯದ ವ್ಯವಸ್ಥೆ ಮಾಡಲಾಗಿದ್ದು, ಪುಸ್ತಕಗಳು ಹಾಗೂ ವಿವಿಧ ದಿನಪತ್ರಿಕೆಗಳನ್ನು ಓದಲು ವ್ಯವಸ್ಥೆ ಕಲ್ಪಿಸಲಾಗಿದೆ.

ಬೇಲೂರಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ವಾರ್ಡನ್ ಸಾಕಮ್ಮ, ಕಂಪ್ಯೂಟರ್ ಶಿಕ್ಷಕಿ ಶಾಲಿನಿ ಇದ್ದರು.

‘ಹಾಸ್ಟೆಲ್‌ನಲ್ಲಿ ಉತ್ತಮ ಸೌಲಭ್ಯ’

‘ನಾವು ಪ್ರಾಜೆಕ್ಟ್ ವರ್ಕ್‌ಗೆ ಬೇಕಾದ ಪ್ರಿಂಟ್ ತೆಗೆದುಕೊಳ್ಳಲು ಕಂಪ್ಯೂಟರ್ ಸೆಂಟರ್‌ಗೆ ಹೋಗಬೇಕಿತ್ತು. ಆದರೆ ಈಗ ಇಲ್ಲೇ ಸಿಗುತ್ತಿರುವುದರಿಂದ ಹೊರಗಡೆ ಹೋಗುವುದು ತಪ್ಪಿದೆ. ಉತ್ತಮವಾದ ಕಂಪ್ಯೂಟರ್ ಶಿಕ್ಷಣ ದೊರೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ನಮಗೆ ಬೇಕಾದ ಎಲ್ಲ ಸವಲತ್ತುಗಳನ್ನು ನೀಡುತ್ತಿದ್ದಾರೆ’ ಎಂದು ಎಂಕಾಂ ವಿದ್ಯಾರ್ಥಿನಿ ಅನಿತಾ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.