ಆಲೂರು: ಭೂ ದಾಖಲೆಗಲನ್ನು ಸುರಕ್ಷಿತವಾಗಿ ಹಾಗೂ ರಯತರಿಗೆ ಶೀಘ್ರವಾಗಿ ಒದಗಿಸುವ ಉದ್ದೇಶದಂದ ಗಣಕೀಕರಣ ಮಾಡಲಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪಟ್ಟಣದ ಮಿನಿ ವಿದಾನಸೌಧ ಕಚೇರಿ ಸಭಾಂಗಣದಲ್ಲಿ ಭೂ-ಸುರಕ್ಷಾ ಯೋಜನೆಯಡಿಯಲ್ಲಿ, ಕಂದಾಯ ಇಲಾಖೆಯ ಭೂ ದಾಖಲೆಗಳ ಗಣಕೀಕರಣ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಗುಣಮಟ್ಟದ ಸೇವೆಗಳು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಮಾಹಿಈ ಮತ್ತು ಭೂ ದಾಖಲೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಂಪೈಟರ್ ಆಪರೇಟರ್‍ಗಳು ಕೆಲಸ ಮಾಡಬೇಕು. ಶಿಥಿಲಗಂಡ ದಾಖಲೆಗಳನ್ನುಕ ಶಾಶ್ವತವಾಗಿ ಡಿಜಿಟಲ್ ರೂಪದಲ್ಲಿ ಉಳಿಸಿಕೊಳ್ಳಲು ನಕಲಿ ದಾಖಲೆಗಳ ಹಾವಳಿ ತಡೆಯಲು, ಕಚೇರಿಗೆ ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸಲು ಮತ್ತು ಮೂಲ ದಾಖಲೆಗಳು ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ದೊರೆಯುವಂತೆ ಮಾಡಲು ಸರ್ಕಾರ ಭೂ ಸುರಕ್ಷಾ ಯೋಜನೆ ಜಾರಿಗೆ ತಂದಿದೆ ಎಂದರು.
ತಹಶೀಲ್ದಾರ್ ಪೂರ್ಣಿಮ ಮಾತನಾಡಿ, ಶಿಥಿಲಗೊಂಡ ದಾಲೆಗಳನ್ನು ಶಾಶ್ವತವಾಗಿ ಡಿಜಿಟಲ್ ರೂಪದಲ್ಲಿ ಉಳಿಸಿಕೊಳ್ಳಲು, ನಕಲಿ ದಾಖಲೆಗಳ ಹಾವಳಿ ತಡೆಯಲು ಯೋಜನೆ ಜಾರಿಗೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಸಿಬ್ಬಂದಿಗಳು, ಸಾರ್ವಜನಿಕರು ಸಹಕರಿಸಬೇಕು ಎಂದರು. ಶಿರಸ್ತೆದಾರ್ ಅಂಕೇಗೌಡ, ಚೈತ್ರಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.