ADVERTISEMENT

ಹಾಸನ: ಪ್ರಕಾಶ್‌ಗೆ ಹುಡಾ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 2:35 IST
Last Updated 25 ಜುಲೈ 2025, 2:35 IST
   

ಹಾಸನ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ಗೌಡಗೆರೆ ಪ್ರಕಾಶ್ ಅವರನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಿಡುಗರಹಳ್ಳಿ ಸಿದ್ದಪ್ಪ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಕಾಶ್ ಎಪಿಎಂಸಿ ಅಧ್ಯಕ್ಷರಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರಾಗಿ 30 ವರ್ಷದಿಂದ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.

‘ಪ್ರಕಾಶ್ ಅವರನ್ನು ಹುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಸುರ್ಜಿವಾಲಾ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ADVERTISEMENT

ಸಣ್ಣೇಗೌಡ, ಸ್ವಾಮಿಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.