
ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠ ಶ್ರೀಗಳು ಭವಿಷ್ಯ ನುಡಿಯುವಲ್ಲಿ ಖ್ಯಾತಿ ಪಡೆದಿದ್ದು ಸಚಿವರು ಇಲ್ಲಿಗೆ ಭೇಟಿ ನೀಡಿರುವುದು ಕುತೂಹಲ ಕೆರಳಿಸಿದೆ.
ಪರಮೇಶ್ವರ್ ಅವರು ಶ್ರೀಗಳೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ .
ಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ.
ಈ ಎಲ್ಲ ಬೆಳವಣಿಗೆ ಕುರಿತು ಊಹಾಪೊಹಗಳು ಇನ್ನಷ್ಟು ಬಲ ಪಡೆದಿದೆ. ರಾಜಕೀಯ ನಾಯಕರು ಮತ್ತು ಗಣ್ಯರ ಭೇಟಿ ಕೇಂದ್ರವಾಗಿರುವ ಕೋಡಿ ಮಠಕ್ಕೆ ಗೃಹ ಸಚಿವರು ಇಂತಹ ರಾಜಕೀಯ ಬೆಳವಣಿಗೆ ನಡುವ ಭೇಟಿ ನೀಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.