ADVERTISEMENT

ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್‌: ಬಿಜೆಪಿ ಮುಖಂಡ ಪರ್ವತಯ್ಯ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 5:34 IST
Last Updated 28 ಫೆಬ್ರುವರಿ 2026, 5:34 IST
ಪರ್ವತಯ್ಯ
ಪರ್ವತಯ್ಯ   

ಬೇಲೂರು: ಕಾಂಗ್ರೆಸ್ ಪಕ್ಷದವರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಪರ್ವತಯ್ಯ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫೆ.14ರಂದು ಶಾಸಕ ಎಚ್.ಕೆ.ಸುರೇಶ್ ಅವರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮವನ್ನು ಏರ್ಪಡಿಸಿದ ಸಂದರ್ಭದಲ್ಲಿ, ರಾಜಕೀಯ ಗಿಮಿಕ್ ಎಂದು ಟೀಕಿಸಿದ ಕಾಂಗ್ರೆಸ್ ಪಕ್ಷದವರು ಶನಿವಾರ ಸ್ನೇಹ ಸಮ್ಮಿಲನ ಎಂಬ ಕಾರ್ಯಕ್ರಮ ಆಯೋಜಿಸಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರನ್ನು ಸನ್ಮಾನಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.

‘ಶಾಸಕರು ಔತಣಕೂಟವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಏರ್ಪಡಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಕೆಲವು ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಚೇರಿಗಳ ಮುಂದೆ ಧರಣಿ ನಡೆಸುತ್ತೇವೆ ಎಂದಿದ್ದರು. ಆದರೆ ಶಾಸಕರು ಯಾವುದೇ ಅಧಿಕಾರಿಗಳನ್ನು ಬಳಸಿಕೊಳ್ಳದೆ ಕಾರ್ಯಕ್ರಮ ನಡೆಸಿದ್ದರು’ ಎಂದರು.

ADVERTISEMENT

ಬಿಜೆಪಿ ಮುಖಂಡರಾದ ಮಂಜುನಾಥ್, ನೆಟ್ಟೆಕೆರೆ ಮಂಜುನಾಥ್, ಚಿಕ್ಕೂಲೆ ರಘು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.